ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬೀದಿಯಲ್ಲಿ ನಿಂತ್ಕಂಡ್ ಬಹುಮತ ತೋರ್ಸಿ ಅಂದ್ರೆ ಆಗಲ್ಲ

Parashurama
Updated On : 1 Feb 2013, 9:41 am

ಹಾಸನ: ಬೀದಿಯಲ್ಲಿ ನಿಂತ್ಕಂಡ್ ಬಹುಮತ ತೋರ್ಸಿ ಅಂದ್ರೆ ತೋರಿಸಲಿಕ್ಕೆ ಆಗಲ್ಲ. ವಿಧಾನಸಭೆ ಅಧಿವೇಶನಕ್ಕೆ ಬರ್ಲಿ, ರಾಜ್ಯ ಸರ್ಕಾರಕ್ಕೆ ಬಹುಮತ ಇದೆಯೋ ಇಲ್ಲವೋ ಎಂಬುದನ್ನು ತೋರಿಸ್ತೀವಿ ಎಂದು ಉಪ ಮುಖ್ಯಮಂತ್ರಿ ಆರ್. ಅಶೋಕ್ ಸವಾಲು ಹಾಕಿದ್ದಾರೆ.  ಕಾಂಗ್ರೆಸ್ ನೇತೃತ್ವದ ಕೇಂದ್ರ  ಸರ್ಕಾರವೂ ಅತಂತ್ರ ಸ್ಥಿತಿಯಲ್ಲಿ ಇದೆ. ಇದನ್ನು ಮರೆತು ಬೀದಿಯಲ್ಲಿ ನಿಂತು ರಾಜ್ಯ ಸರ್ಕಾರಕ್ಕೆ ಬಹುಮತ ಇಲ್ಲ. ಕೂಡಲೇ ವಿಸರ್ಜಿಸಬೇಕು ಎಂದು ಹೇಳಿದರೆ ಬಹುಮತ ತೋರಿಸಲಿಕ್ಕೆ ಆಗಲ್ಲ. ಹೇಗಿದ್ರೂ ವಿಧಾನಸಭೆ ಅಧಿವೇಶನ ನಡೆಯುತ್ತದೆಯಲ್ಲಾ ಅಲ್ಲಿಗೆ ಬಂದು ಕೇಳಲಿ. ಆಗ ಬಹುಮತ ಇದೆಯೋ ಇಲ್ಲವೋ ಎಂಬುದನ್ನು ಪ್ರದರ್ಶಿಸಲಾಗುವುದು ಎಂದು ಹಾಸನ ತಾಲೂಕು ದುದ್ದ ಗ್ರಾಮದಲ್ಲಿ ಸಚಿವ ಅಶೋಕ್ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರತಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು.  ಬಹುಮತ ತೋರಿಸಿ ಅಂತಾ ಈಗಲ್ಲಾ ಬಹಳ ಹಿಂದಿನಿಂದಲೂ ಒತ್ತಾಯಿಸಲಾಗುತ್ತಿದೆ. ಅಲ್ಲದೇ ರಾಜ್ಯ ಸರ್ಕಾರವನ್ನು ವಿಸರ್ಜಿಸಬೇಕು ಎಂದು ಹೇಳಲಾಗುತ್ತಿದೆ. ಹೊಸದೇನು ಅಲ್ಲ. ರಾಜ್ಯ ಸರ್ಕಾರ ತನ್ನ ಪೂರ್ಣ ಅವಧಿಯನ್ನು ಪೂರ್ಣಗೊಳಿಸುತ್ತದೆ. ಆ ಬಗ್ಗೆ ಯಾವುದೇ ಅನುಮಾನ ಬೇಡ, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಉತ್ತಮ ಬಜೆಟ್ ಅನ್ನು ರಾಜ್ಯದ ಜನತೆಗೆ ನೀಡುತ್ತಾರೆ ಎಂಬ ವಿಶ್ವಾಸವನ್ನು ಅವರು  ವ್ಯಕ್ತಪಡಿಸಿದರು.
ಕೆಫೆ ಮೇಲೆ ದಾಳಿ:  ಮಂಗಳೂರಿನಲ್ಲಿ ಕಾಫಿ ಕೆಫೆ ಮೇಲೆ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಬಾರದು ಎಂಬ ಕಾನೂನು ಇದೆ. ಅದನ್ನು ಕೆಫೆಯಲ್ಲಿ ಯುವಕ, ಯುವತಿಯರು ಉಲ್ಲಂಘಿಸಿದ್ದಾರೆ ಎಂದು ದೂರಲಾಗಿದೆ. ಏನೇ ಇರಲಿ, ಕಾನೂನನ್ನು ಕೈ ಗೆತ್ತಿಕೊಳ್ಳಲು ಯಾರಿಗೂ ಅಧಿಕಾರವಿಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.
ಲೋಕಾಯುಕ್ತರ ನೇಮಕ:  ನೂತನ ಲೋಕಾಯುಕ್ತರನ್ನಾಗಿ ನಿವೃತ್ತ ಮುಖ್ಯ ನ್ಯಾಯಾಧೀಶ ಡಾ. ವೈ. ಭಾಸ್ಕರ್ರಾವ್ ಅವರನ್ನು ಕಾನೂನಿನ ಚೌಕಟ್ಟಿನಲ್ಲಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ. ಈ ಬಗ್ಗೆ ಆಕ್ಷೇಪಗಳಿದ್ದರೆ ಕಾನೂನು ಸಚಿವ ಸುರೇಶ್ಕುಮಾರ್ ಪರಿಶೀಲನೆ ನಡೆಸುತ್ತಾರೆ ಎಂದು ನುಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments