ರೇವಣ್ಣ ಮನೆಯಲ್ಲಿ ಅಶೋಕ ಭೋಜನ
ಹೊಳೆನರಸೀಪುರ: ಪಕ್ಷ ಯಾವುದಾದರೇನು... ದೋಸ್ತಿಗೇನು ಸಾಟಿಯಿಲ್ಲ.. ಎಲ್ಲೆಯಿಲ್ಲ ಎನ್ನುವಂತೆ ಗೃಹ ಸಚಿವ ಆರ್.ಆಶೋಕ್ ಪಟ್ಟಣದಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಅವರ ಆತ್ಮೀಯತೆಗೆ ಕಟ್ಟುಬಿದ್ದು, ಪಟ್ಟಣದಲ್ಲಿ ರೇವಣ್ಣ ಅವರ ನಿವಾಸಕ್ಕೆ ತೆರಳಿ ಭೂರಿ ಭೋಜನ ಸವಿದರು.
ಆರ್. ಅಶೋಕ್ ಪಟ್ಟಣದಲ್ಲಿನ ಬಸ್ನಿಲ್ದಾಣದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಎರಡು ಗಂಟೆ ತಡವಾಗಿ ಆಗಮಿಸಿ, ಎಲ್ಲಾ ಕಾರ್ಯಕ್ರಮಗಳನ್ನೂ ಉದ್ಘಾಟಿಸಿದರು. ನಂತರ ಸಭೆಯನ್ನು ಉದ್ಧೇಶಿಸಿ ಮಾತನಾಡಿ ನೇರವಾಗಿ ಎಚ್.ಡಿ.ರೇವಣ್ಣ ನಿವಾಸಕ್ಕೆ ತೆರಳಿ ಬಿರಿಯಾನಿ ಸವಿದರು. ಈ ಸಂದರ್ಭದಲ್ಲಿ ಮಾಂಸಹಾರಿ ಊಟವಲ್ಲದೇ, ಸಸ್ಯಾಹಾರಿ ಊಟದ ವ್ಯವಸ್ಥೆಯನ್ನೂ ಸಹ ಮಾಡಲಾಗಿತ್ತು.
ಉಪ-ಮುಖ್ಯಮಂತ್ರಿ ಜತೆಗೆ ಪಟೇಲ್ ಶಿವರಾಮ್, ಮಾಜಿ ಶಾಸಕ ಬಿ.ವಿ.ಕರೀಗೌಡ, ಸಾರಿಗೆ ನಿಗಮದ ಹಿರಿಯ ಅಧಿಕಾರಿಗಳೂ ಎಚ್.ಡಿ.ರೇವಣ್ಣ ಆಹ್ವಾನದ ಮೇರೆಗೆ ಅವರ ನಿವಾಸಕ್ಕೆ ತೆರಳಿ ಭೋಜನ ಸವಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.