17.6 ಕೋಟಿ ವೆಚ್ಚದ ಏತ ನೀರಾವರಿ ಯೋಜನೆ
ಚನ್ನರಾಯಪಟ್ಟಣ: ಯಾರು ಒಳ್ಳೆ ಕೆಲಸ ಮಾಡಿದರೂ ಅವರನ್ನು ಸ್ಮರಿಸುವುದು ಎಲ್ಲರ ಕರ್ತವ್ಯವಾಗಬೇಕು ಎಂದು ಶಾಸಕ ಸಿ.ಎಸ್. ಪುಟ್ಟೇಗೌಡ ತಿಳಿಸಿದರು. ತಾಲೂಕಿನ ನುಗ್ಗೇಹಳ್ಳಿಯಲ್ಲಿ 17.6 ಕೋಟಿ ವೆಚ್ಚದಲ್ಲಿ ಏತ ನೀರಾವರಿ ಮುಖೇನ 11 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಜೆಡಿಎಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ತಾವು ಶಾಸಕರಾಗಿದ್ದರೂ ಏತ ನೀರಾವರಿ ಕಾರ್ಯ ಮಾಡಲು ಸಾಧ್ಯವಾಗಲಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದ ಸಂದರ್ಭದಲ್ಲಿ ಏತ ನೀರಾವರಿ ಯೋಜನೆಗೆ ಮಂಜೂರಾತಿ ನೀಡಿದ ರಾಜ್ಯ ಸರ್ಕಾರಕ್ಕೆ ತಾವು ಚಿರಋಣಿಯಾಗಿದ್ದೇನೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಆರ್ಥಿಕ ಮಂಜೂರಾತಿ ನೀಡಿ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಗುತ್ತಿಗೆದಾರರು ಮುಂದಿನ ಎರಡು ವರ್ಷದಲ್ಲಿ ಎಲ್ಲಾ ಕೆರೆಗಳಿಗೆ ನೀರು ತುಂಬಿಸಿ ಗಂಗೆ ಪೂಜೆ ಮಾಡುವ ಸಂದರ್ಭದಲ್ಲಿ ಯೋಜನೆಗೆ ಕಾರಣರಾದವರನ್ನು ನೆನೆಯುತ್ತಾರೆ ಎಂದು ತಿಳಿಸಿದರು. ರಾಜ್ಯದಲ್ಲಿ ಎಷ್ಟೋ ಏತ ನೀರಾವರಿ ಯೋಜನೆಗಳು ನಿರ್ವಹಣೆಯಿಲ್ಲದೆ ಕಾರ್ಯ ಸ್ಥಗಿತಗೊಂಡಿವೆ. ಈ ನಿಟ್ಟಿನಲ್ಲಿ ನೀರು ಬಳಕೆದಾರರ ಸಂಘ ಅತಿ ಮುಖ್ಯವಾಗಿದ್ದು, ಸಂಘದ ಎಲ್ಲಾ ಸದಸ್ಯರುಗಳು ಒಗ್ಗೂಡಿ ನೀರಿನ ಬಳಕೆಯತ್ತಾ ಮುಂದಾಗಬೇಕು ಎಂದು ಹೇಳಿದರು. ನವಿಲೆ ಏತ ನೀರಾವರಿ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ ಏತ ನೀರಾವರಿ ಯೋಜನೆಯಿಂದ ಕೆರೆಗಳಿಗೆ ನೀರು ತುಂಬಿಸಿದರೆ ಅಂತರ್ಜಲದಿಂದ ಬೋರ್ವೆಲ್ಗಳಲ್ಲಿ ನೀರಿನ ಸುಧಾರಣೆಯಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಕೆರೆಗಳಿಗೆ ತುಂಬಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ತಿಳಿಸಿದರು.
ನುಗ್ಗೇಹಳ್ಳಿ ರಂಭಾಪುರಿ ಹಿರೇಮಠದ ಮಹೇಶ್ವರ ಸ್ವಾಮೀಜಿ, ಗಿರಿಕ್ಷೇತ್ರದ ಚಂದ್ರಶೇಖರ ಸ್ವಾಮೀಜಿ, ನುಗ್ಗೇಹಳ್ಳಿ ಏತ ನೀರಾವರಿ ಸಮಿತಿ ಸಂಚಾಲಕ ಶಂಕರ್, ಜಿಪಂ ಸದಸ್ಯ ರಂಗಸ್ವಾಮಿ, ಕಿಶೋರ್, ನಂಜುಂಡೇಗೌಡ,
ತಾಪಂ ಮಾಜಿ ಅಧ್ಯಕ್ಷ ಜವರೇಗೌಡ, ಜಿಪಂ ಮಾಜಿ ಸದಸ್ಯ ಮಂಜೇಗೌಡ, ಗ್ರಾಪಂ ಅಧ್ಯಕ್ಷೆ ಶೋಭಾಶೇಖರ್ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.