ಅಗ್ನಿ ಅನಾಹುತ ತಡೆಗಟ್ಟುವ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ
ಹೊಳೆನರಸೀಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಸಿಸಿ ವಿಭಾಗದಿಂದ ವಿದ್ಯಾರ್ಥಿಗಳಿಗಾಗಿ ಅಗ್ನಿ ಅನಾಹುತ ತಡೆಗಟ್ಟುವ ಕುರಿತು ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆಯನ್ನು ಸ್ಥಳೀಯ ಅಗ್ನಿಶಾಮಕ ಠಾಣೆಯ ಸಹಯೋಗದೊಂದಿಗೆ ಇತ್ತೀಚೆಗೆ ಕೈಗೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಪಟ್ಟಣದ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಮಂಜೇಗೌಡ ಉಪನ್ಯಾಸ ನೀಡಿ, ಅಗ್ನಿ ಅನಾಹುತ ಹಾಗೂ ಆ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆ ಕುರಿತಂತೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಗ್ನಿಶಾಮಕ ಠಾಣೆಯ ಉಪ ಠಾಣಾಧಿಕಾರಿ ಕೃಷ್ಣೇಗೌಡ ಹಾಗೂ ಸಿಬ್ಬಂದಿಗಳು ಅಗ್ನಿ ಅನಾಹುತ ತಡೆಯುವ ಕುರಿತು ನಾನಾ ಬಗೆಯ ವಿಧಾನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಬಿ.ಇರ್ಷಾದ್ ಅಧ್ಯಕ್ಷತೆ ವಹಿಸಿದ್ದರು. ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಎನ್.ವಿ.ಶ್ರೀನಿವಾಸ್, ಅಧ್ಯಾಪಕರು, ಸಿಬ್ಬಂದಿವರ್ಗ ಹಾಗೂ ಎನ್ಸಿಸಿ ಕೆಡೆಟ್ಗಳು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.