ನಿವೃತ್ತ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ
ಅರಕಲಗೂಡು: ತಾಲೂಕಿನ ಹೆತ್ತಗೌಡನ ಹಳ್ಳಿ ಪ್ರಾಥಮಿಕ ಶಾಲೆಯ ಮಖ್ಯ ಶಿಕ್ಷಕ ಟಿ ವಿ ಶಿವರಾಮಯ್ಯ 35ವರ್ಷಗಳ ಸುದೀರ್ಘ ಸೇವೆಯ ನಂತರ ನಿವೃತ್ತರಾದರು. ತಾಲೂಕಿನ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸಿದ ಟಿ.ವಿ. ಶಿವರಾಮಯ್ಯ, ಹೆತ್ತಗೌಡನಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ಕಳೆದ 9 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಶಾಲಾವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕರ ಸಂಘದ ಕಾರ್ಯದರ್ಶಿ ಮುತ್ತೇಗೌಡ, ಗ್ರಾಮಸ್ಥರು, ಎಸ್ ಡಿ ಎಂ ಸಿ ಅಧ್ಯಕ್ಷರು, ಶಿಕ್ಷಕರ ಸಂಘದ ನಿಂಗರಾಜು, ಬಿ ಸಿ ದೇವಾಜಿ, ಮತ್ತು ಇತರರು ಟಿ ವಿ ಶಿವರಾಮಯ್ಯ ಸೇವೆಯನ್ನು ಸ್ಮರಿಸಿ ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಟಿ. ವಿ ಶಿವರಾಮಯ್ಯ ಅವರನ್ನು ಸತ್ಕರಿಸಿ ಅದ್ದೂರಿಯಿಂದ ಬೀಳ್ಕೊಡಲಾಯಿತು. ಶಿಕ್ಷಣ ಇಲಾಖೆಯ ಇಸಿಓ ಜವರಪ್ಪ, ಮುಖ್ಯ ಶಿಕ್ಷಕ ಕೃಷ್ಣ ಮತ್ತು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.