ರಾಜೀವ್ಗಾಂಧೀ ಮಾನವ ಸೇವಾ ಪ್ರಶಸ್ತಿ
ಹಾಸನ: ಭಾರತ ಸರ್ಕಾರ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣಕ್ಕಾಗಿ 10 ವರ್ಷಕ್ಕಿಂತ ಹೆಚ್ಚಿನ ಉತ್ತಮ ಸೇವೆಯನ್ನು ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ರಾಜೀವ್ಗಾಂಧಿ ಮಾನವ ಸೇವಾ ಪ್ರಶಸ್ತಿ ನೀಡಲಾಗುವುದು. 2012 ಮತ್ತು 2013ನೇ ವರ್ಷದ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಇವರಿಂದ ಪಡೆಯುವುದು. ಅಂಗ್ಲ ಭಾಷೆಯಲ್ಲಿ ತ್ರಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಫೆಬ್ರವರಿ 28ರೊಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 9ನೇ ಕ್ರಾಸ್, ಕೆ.ಆರ್.ಪುರಂ, ಹಾಸನ ಇವರಿಗೆ ಸಲ್ಲಿಸುವುದು. ನಿಗಧಿತ ದಿನಾಂಕದ ನಂತರ ಬಂದ ಅರ್ಜಿಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08172-267218ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಕೋರಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.