ರು. 53 ಕೋಟಿ ವೆಚ್ಚದ 3ನೇ ಹಂತದ ಯೋಜನೆಗೆ ಶಾಸಕರ ಚಾಲನೆ
ಚನ್ನರಾಯಪಟ್ಟಣ: ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕರು ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಭೆಗಳಿಗೆ ಗೈರಾಗಲು ಸೂಚನೆ ನೀಡಿದ್ದಾರೆ. ಅವರ ಕಾಟವನ್ನು ತಾವು ಮುಂದಿನ ದಿನಗಳಲ್ಲಿ ಸಹಿಸುವುದಿಲ್ಲ ಎಂದು ಶಾಸಕ ಸಿ.ಎಸ್. ಪುಟ್ಟೇಗೌಡ ತಿಳಿಸಿದರು. ಪಟ್ಟಣದಲ್ಲಿ 53 ಕೋಟಿ ವೆಚ್ಚದಲ್ಲಿ ಮೂರನೇ ಹಂತದ ಕುಡಿಯುವ ನೀರು ಹಾಗೂ 5 ಕೋಟಿ ವೆಚ್ಚದಲ್ಲಿ ನಗರೋತ್ಥಾನ ಯೋಜನೆಗೆ ಚಾಲನೆ ನೀಡಿ ಶಾಸಕರು ಮಾತನಾಡಿದರು.
ತಮ್ಮ ರಾಜಕೀಯ ಬೆಳವಣಿಗೆಯನ್ನು ಸಹಿಸದ ಜಿಲ್ಲೆಯ ಪ್ರಭಾವಿ ನಾಯಕರು ಎಲ್ಲಾ ಹಂತದಲ್ಲಿಯೂ
ತುಳಿಯುವ ಯತ್ನ ಮಾಡುತ್ತಿದ್ದಾರೆ. ಆದರೆ ಜನತೆಯ ಆಶೀರ್ವಾದ ಇರುವವರೆಗೂ ತಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಜೆಡಿಎಲ್ಪಿ ನಾಯಕ ಎಚ್.ಡಿ ರೇವಣ್ಣ ಅವರನ್ನು ಟೀಕಿಸಿದರು.
ನುಗ್ಗೇಹಳ್ಳಿ ಏತ ನೀರಾವರಿ ಹಾಗೂ ಪಟ್ಟಣದ ಕುಡಿಯುವ ನೀರು ಯೋಜನೆಗೆ ಸರ್ಕಾರ ಒಪ್ಪಿಗೆ ನೀಡಿ ಟೆಂಡರ್ ಆದ ಬಳಿಕ ಕೆಲವರಿಗೆ ತಿಳಿದ ಹಿನ್ನೆಲೆಯಲ್ಲಿ ಅದಕ್ಕೆ ಕೊಕ್ಕೆ ಹಾಕಲು ಸಾಧ್ಯವಾಗಿಲ್ಲ. ಮೊದಲೇ ತಿಳಿದಿದ್ದರೆ ಈ ಕಾಮಗಾರಿ ಅನುಮೋದನೆಯಾಗದಂತೆ ತಡೆಯೊಡ್ಡುತ್ತಿದ್ದರು ಎಂದು ಆರೋಪಿಸಿದರು.
ಮಾಜಿ ಶಾಸಕ ವಿಶ್ವನಾಥ್, ಪುರಸಭಾಧ್ಯಕ್ಷೆ ಪುಷ್ಪರವಿಕುಮಾರ್, ಜಿಪಂ ಮಾಜಿ ಉಪಾಧ್ಯಕ್ಷ ಚಂದ್ರಶೇಖರ್, ಜಿಪಂ ಸದಸ್ಯ ನಂಜುಂಡೇಗೌಡ, ಕಿಶೋರ್, ಮಾಜಿ ಅಧ್ಯಕ್ಷ ರವೀಂದ್ರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪಟೇಲ್ ಮಂಜುನಾಥ್, ಕಾಂಗ್ರೆಸ್ ಮುಖಂಡ ಎಂ ಶಂಕರ್, ಎಚ್.ಎಸ್. ಶ್ರೀಕಂಠಯ್ಯ, ಜಿಪಂ ಮಾಜಿ ಸದಸ್ಯ ಮಂಜೇಗೌಡ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.