ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವ್ಯಕ್ತಿ, ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ

Parashurama
Updated On : 3 Feb 2013, 11:30 am

ಹಾಸನ: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ನಿರತವಾಗಿರುವ ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡುವ ಯೋಜನೆಯನ್ನು ಭಾರತ ಸರ್ಕಾರ ಅಂತಾರಾಷ್ಟ್ರೀಯ ಮಕ್ಕಳ ವರ್ಷವಾದ 1979ರಿಂದ ಜಾರಿಗೆ ತಂದಿರುತ್ತದೆ. ಪ್ರಶಸ್ತಿಯನ್ನು 5(ಐದು) ಸ್ವಯಂ ಸೇವಾ ಸಂಸ್ಥೆಗಳಿಗೆ ಪ್ರತಿ ಸಂಸ್ಥೆಗೆ 3ಲಕ್ಷ  ರು. ಮತ್ತು 3(ಮೂರು) ವ್ಯಕ್ತಿಗಳಿಗೆ, ಪ್ರತಿ ವ್ಯಕ್ತಿಗೆ ರೂ 1.00 ಲಕ್ಷಗಳಂತೆ ನೀಡುತ್ತದೆ.  ಐದು ವರ್ಷ ಉತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಹಾಗೂ ಸಂಘ ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಲಾಗುವುದು. ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟಿರುವ ಸಮಿತಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ ಹಾಗೂ ಸಂಸ್ಥೆಗಳನ್ನು ಆಯ್ಕೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ.
 2012 ಮತ್ತು 2013ನೇ ವರ್ಷದಲ್ಲಿ ನೀಡುವ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ  ನಮೂನೆಯನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಇವರಿಂದ ಪಡೆಯುವುದು. ಅಂಗ್ಲ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಫೆಬ್ರವರಿ 28ರೊಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 9ನೇ ಕ್ರಾಸ್, ಕೆ.ಆರ್.ಪುರಂ, ಹಾಸನ ಇವರಿಗೆ ಸಲ್ಲಿಸುವುದು.   ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08172-267218ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಕೋರಿದ್ದಾರೆ.    

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments