ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕುಡುರಗಹಳ್ಳಿ: ಶಾಲೆ ಹೆಚ್ಚುವರಿ ಕಟ್ಟಡ ಉದ್ಘಾಟನೆ

Parashurama
Updated On : 17 Feb 2013, 12:26 pm

ಸಕಲೇಶಪುರ:  ಪಟ್ಟಣದ ಕುಡುಗರಹಳ್ಳಿ ಬಡಾವಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ನಿರ್ಮಾಣವಾಗಿರುವ ಹೆಚ್ಚುವರಿ ಕಟ್ಟಡವನ್ನು ಗುರುವಾರ ಶಾಸಕ ಎಚ್.ಕೆ. ಕುಮಾರಸ್ವಾಮಿ ಉದ್ಘಾಟಿಸಿದರು.
ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ್ಲ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಲು ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಅನುಷ್ಟಾನಗೊಳಿಸಿವೆ. ಆದ್ದರಿಂದ ಪೋಷಕರು ಖಾಸಗಿ ಶಾಲೆಗಳತ್ತ ವಾಲದೆ, ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿಯೇ ಮುಂದುವರೆಸಬೇಕು ಎಂದು ಮನವಿ ಮಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಮಾತನಾಡಿದರು.ಪುರಸಭೆ ಮಾಜಿ ಉಪಾಧ್ಯಕ್ಷ ಉಮೇಶ್, ಯುವ ಜೆಡಿಎಸ್ ಅಧ್ಯಕ್ಷ ಸ.ಬ. ಭಾಸ್ಕರ್, ಶಾಲೆ ಮುಖ್ಯ ಶಿಕ್ಷಕಿ ಜಯಮ್ಮ, ಎಸ್‌ಡಿಎಂಸಿ ಅಧ್ಯಕ್ಷ ರಂಗಸ್ವಾಮಿ, ಬಿಆರ್‌ಸಿ ಅನಿತಾ, ಪುರಸಭೆ ಮಾಜಿ ಸದಸ್ಯ ಕೃಷ್ಣೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement