ಆರೋಗ್ಯದ ವಿಚಾರದಲ್ಲಿ ಮುನ್ನೆಚ್ಚರಿಕೆ ಮುಖ್ಯ
ಪಿರಿಯಾಪಟ್ಟಣ: ಆರೋಗ್ಯದ ವಿಚಾರದಲ್ಲಿ ಮುನ್ನೆಚ್ಚರಿಕೆ ಬಹಳ ಮುಖ್ಯ ಎಂದು ತಾಲೂಕು ಆಡಳಿತಾಧಿಕಾರಿ ಡಾ.ಆರ್. ಶಶಿಕಲಾ ಹೇಳಿದರು.
ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬ ಪೋಷಕರೂ ಸಹ ತಮ್ಮ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವುದನ್ನು ತಪ್ಪಿಸಬಾರದು. ಆರೋಗ್ಯದ ವಿಚಾರದಲ್ಲಿ ತತ್ಸಾರ ಮಾಡಿದ್ದಲ್ಲಿ ಅದರ ಪರಿಣಾಮವನ್ನು ಸ್ವತಃ ತಾವೆ ಅನುಭವಿಸಬೇಕಾಗುತ್ತದೆ ಎಂಬ ಎಚ್ಚರಿಕೆ ಪ್ರತಿಯೊಬ್ಬರಲ್ಲಿರಬೇಕು ಎಂದು ತಿಳಿಸಿದರು.
ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಂ.ಜಿ. ತ್ರಿವೇಣಿ, ಹಿರಿಯ ಆರೋಗ್ಯ ನಿರೀಕ್ಷಕ ಹೆಗಡೆ, ಮಹಿಳಾ ಹಿರಿಯ ಆರೋಗ್ಯ ನಿರೀಕ್ಷಕಿ ಭವಾನಿ, ಡಿಪಿಎಂಒ ಪ್ರವೀಣ್, ಬಿಎಚ್ಇಒ ರಮೇಶ್ ಡಾ. ಅನೀಲ್ ಇದ್ದರು.