ಹಾಸನ

ಬಿಎಸ್‌ಆರ್ ಕಾಂಗ್ರೆಸ್ ಪ್ರತಿಭಟನೆ

ಹಾಸನ: ಸ್ಥಳೀಯ ಸಂಸ್ಥೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿಎಸ್‌ಆರ್ ಕಾಂಗ್ರೆಸ್ 9 ವಾರ್ಡ್‌ಗಳ ಅಭ್ಯರ್ಥಿಗಳ ನಾಮಪತ್ರ ತಾಂತ್ರಿಕ ಕಾರಣದಿಂದ ತಿರಸ್ಕಾರಗೊಂಡಿರುವುದಕ್ಕೆ ಚುನಾವಣಾ ಅಧಿಕಾರಿಗಳೇ ಕಾರಣವಾಗಿದ್ದು, ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ ಕೊಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಅವರಿಗೆ ಮನವಿ ನೀಡಿದರು. ಹಾಸನ ನಗರಸಭೆ ಚುನಾವಣೆಗೆ ಬಿಎಸ್‌ಆರ್ ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿ ತಿರಸ್ಕೃತಗೊಂಡಿರುವ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಚುನಾವಣಾ ಅಧಿಕಾರಿಗಳ ತಪ್ಪು ಮಾಹಿತಿಯಿಂದಾಗಿ ನಾಮಪತ್ರ ಸಲ್ಲಿಸುವಾಗ ಸೂಕ್ತ ದಾಖಲಾತಿ ಒದಗಿಸಲಿಲ್ಲ, ಅದಕ್ಕೆ ಅಧಿಕಾರಿಗಳೆ ಹೊಣೆ ಹೊರತು ಅಭ್ಯರ್ಥಿಗಳಲ್ಲ ಎಂದು ಆರೋಪಿಸಿ ಘೋಷಣೆ ಕೂಗಿದ ಅವರು, ಪಕ್ಷ ಮಾನ್ಯತೆ ಪಡೆದಿಲ್ಲ ಎಂಬುದು ಅಧಿಕಾರಿಗಳಿಗೆ ತಿಳಿದಿದ್ದರೂ ಕೇವಲ ಒಬ್ಬ ಸೂಕ್ತರ ಹೆಸರನ್ನು ನಮೂದಿಸಿಕೊಂಡಿದ್ದಾರೆ ಎಂದು ದೂರಿದರು. ಚುನಾವಣಾ ಆಯೋಗದಿಂದ ಬಿಎಸ್‌ಆರ್ ಕಾಂಗ್ರೆಸ್ ಮಾನ್ಯತೆ ಪಡೆದಿಲ್ಲ. ಆದ್ದರಿಂದ ಅಭ್ಯರ್ಥಿಗಳನ್ನು ಪಕ್ಷೇತರರೆಂದೇ ಪರಿಗಣಿಸಬೇಕಾಗಿದೆ. ಮಾನ್ಯತೆ ಪಡೆದ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ಒಬ್ಬ ಸೂಚಕರ ಹೆಸರನ್ನು ನಮೂದಿಸಿದರೆ ಸಾಕು.
ಆದರೆ ಪಕ್ಷೇತರ ಅಭ್ಯರ್ಥಿಗಳು ಕಡ್ಡಾಯವಾಗಿ ಐದು ಮಂದಿ ಸೂಚಕರ ಹೆಸರನ್ನು ನಮೂದಿಸಲೇಬೇಕು. ಆದರೆ ಬಿಎಸ್‌ಆರ್ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ಕೇವಲ ಒಂದೇ ಸೂಚಕ ಹೆಸರನ್ನು ನಮೂದಿಸಿದ್ದು, ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ತಪ್ಪಾಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ನಾಮಪತ್ರವನ್ನು ತಿರಸ್ಕರಿಸಲಾಗಿದೆ.
ಬಿಎಸ್‌ಆರ್ ಕಾಂಗ್ರೆಸ್ ವಾರ್ಡ್ 15ರಿಂದ ಅಮ್ಜದ್‌ಖಾನ್, 16ನೇ ವಾರ್ಡ್ ನಿಂದ ಲಂಕೇಶ್, 17ನೇ ವಾರ್ಡ್ ನಿಂದ ಸುಹಿಲ್‌ಪಾಷ, 18ನೇ ವಾರ್ಡ್‌ನಿಂದ ಅಶ್ವಥ್, 19ನೇ ವಾರ್ಡ್‌ನಿಂದ ಶ್ರೀನಿವಾಸ್, 21ನೇ ವಾರ್ಡ್‌ನಿಂದ ನಯಾಜ್, 22ನೇ ವಾರ್ಡ್‌ನಿಂದ ರಿಯಾಜ್, 26ನೇ ವಾರ್ಡ್ ನಿಂದ ಶಾಹಿರ್‌ತಾಜ್, 28ನೇ ವಾರ್ಡ್ ನಿಂದ ಮುಬಾರಕ್ ಇವರುಗಳ ನಾಮಪತ್ರ ತಿರಸ್ಕೃತಗೊಂಡು ಒಟ್ಟು 9 ವಾರ್ಡ್‌ಗಳ ಅಭ್ಯರ್ಥಿಗಳು ಆಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಐದು ಮಂದಿ ಸೂಚಕರ ಹೆಸರನ್ನು ನಮೂದಿಸಿದ್ದೆವು, ಆದರೆ ಚುನಾವಣೆ ಅಧಿಕಾರಿಗಳು ಒಂದೇ ಸೂಚಕರ ಹೆಸರು ಸಾಕು ಎಂದು ವಾಪಸ್ ಕಳುಹಿಸಿದರು. ನಮ್ಮದಲ್ಲದ ತಪ್ಪಿಗೆ ಚುನಾವಣಾ ಸ್ಪರ್ಧೆಯಿಂದ ನಿರ್ಗಮಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದ ಅವರು, ಇಬ್ಬರು ಕೆಜೆಪಿ ಅಭ್ಯರ್ಥಿಗಳ ನಾಮಪತ್ರಗಳೂ ಇದೇ ರೀತಿ ತಿರಸ್ಕೃತ ಗೊಂಡಿವೆ ಎಂದು ದೂರಿದರು.
ಈ ಮಧ್ಯೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಗೋಪಾಲಕೃಷ್ಣ  ಪ್ರತಿಭಟನಾನಿರತ ಬಿಎಸ್‌ಆರ್ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾಮಪತ್ರ ಸಲ್ಲಿಸುವ ವಿಧಾನದ ಬಗ್ಗೆ ಮನವರಿಕೆ ಮಾಡಿಕೊಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!