ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಡಿಸಿ ಕಚೇರಿ ಎದುರು ಪ್ರತಿಭಟನೆ

Parashurama
Updated On : 28 Feb 2013, 12:14 pm

ಹಾಸನ: ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ನಿಟ್ಟೂರ ಗ್ರಾಪಂ ವ್ಯಾಪ್ತಿಯ ಪುರದಕಟ್ಟೆಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ಕೂಲಿ ಕಾರ್ಮಿಕರಿಗೆ ನಿಗದಿತ ಕೂಲಿ ನೀಡದೆ ವಂಚಿಸಲಾಗುತ್ತಿದೆ ಎಂದು ತಿರುಪತಿಹಳ್ಳಿ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ನಗರದ ಹೇಮಾವತಿ ಪ್ರತಿಮೆಯಿಂದ ಮೆರವಣಿಗೆ ಪ್ರಾರಂಭಿಸಿ ಎನ್.ಆರ್.ವೃತ್ತ, ಬಿ.ಎಂ.ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಕಚೇರಿ ಎದುರು ಕೆಲ ಸಮಯ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಪುರದ ಕಟ್ಟೆಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿರುವ ಕೂಲಿಯ ದರವನ್ನು 155 ರು. ಇದ್ದರೂ ಸರಿಯಾಗಿ ಕೂಲಿ ನೀಡುತ್ತಿಲ್ಲ. ನಿಟ್ಟೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಿರುಪತಿಹಳ್ಳಿ ಗ್ರಾಮಸ್ಥರು ಕಾಮಗಾರಿ ನಿರ್ವಹಿಸುತ್ತಿದ್ದಾರೆ. ಈವರೆಗೂ ಕೂಲಿ ಕಾರ್ಮಿಕರಿಗೆ ಕೂಲಿಯನ್ನು ನೀಡದೆ ಹಣವನ್ನು ಲೂಟಿ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಿನಗೂಲಿ ಹೆಚ್ಚಿಸಬೇಕು:  ಫೆ.8 ರಿಂದ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕಾಮಗಾರಿ ಪ್ರಾರಂಭಿಸಿ ಪ್ರಸ್ತುತದವರೆಗೆ ಕೂಲಿ ನಿರ್ವಹಿಸುಲಾಗುತ್ತಿದೆ. 44 ಕೂಲಿ ಕಾರ್ಮಿಕರ ಹಾಜರಾತಿ 456 ದಿನಗಳಾಗಿವೆ. ಈಗ 14 ದಿನಗಳಿಗೆ ಕೇವಲ 29 ಸಾವಿರಗಳೆಂದು ಹೇಳಿದ್ದಾರೆ. ಭೀಕರ ಬರಗಾಲದ ಪರಿಸ್ಥಿತಿಯಲ್ಲಿ ಒಬ್ಬನಿಗೆ 65 ರಿಂದ 70 ರು.ಗಳನ್ನು ಮಾತ್ರ ನೀಡುತ್ತಿದ್ದಾರೆ. ಈ ಕೂಡಲೆ ರೈತರ ಕಷ್ಟವನ್ನು ಅರಿತು 155 ರು.ಗೆ ದಿನಗೂಲಿಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಇದೇ ರೈತರು ಬೇರೆಡೆ ಕೂಲಿಗೆ ಹೋದಲ್ಲಿ ಪ್ರತಿನಿತ್ಯ 200 ರು.ನಿಂದ 300 ರು. ನೀಡಲಾಗುತ್ತಿದೆ. ಜೊತೆಗೆ ಊಟ ತಿಂಡಿ ಕೂಡ ಸೇರಿರುತ್ತದೆ. ಅಂತಹದರಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಿಗಧಿ ಪಡಿಸುವಂತಹ ಕೂಲಿಯನ್ನು ಸಹ ನೀಡದೆ ಅಧಿಕಾರಿಗಲು ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು.
ಕಾರ್ಮಿಕರ ಜೀವಕ್ಕೆ ಭದ್ರತೆ ಇಲ್ಲ:  ಅಷ್ಟೇ ಅಲ್ಲದೆ ಕೂಲಿ ಕಾರ್ಮಿಕರು ಈ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಅನಾಹುತಗಳು ಸಂಭವಿಸಿದರೆ ಅದಕ್ಕೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಕೂಲಿ ಕಾರ್ಮಿಕರು ತಮ್ಮ ಜೀವನ್ನು ಪಣ ಇಟ್ಟು ಕೆಲಸ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರ್ಮಿಕರ ಜೀವಕ್ಕೆ ಭದ್ರತೆ ಇಲ್ಲದಂತಾಗಿದೆ ಎಂದು ದೂರಿದರು.
ರೈತ ಸಂಘದ ಆನೆಕೆರೆ ರವಿ, ರಮೇಶ್, ಚೆಲುವರಾಜು, ಧರ್ಮೇಶ್, ವಿಠಲ್, ಮಂಜುನಾಥ್, ಅರ್ಜುನ್, ಕುಮಾರ್, ಮರಿಗೌಡ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments