ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಇಂದು ವಿದ್ಯುತ್ ವ್ಯತ್ಯಯ

Parashurama
Updated On : 28 Feb 2013, 11:13 am

ತುರುವೇಕೆರೆ: ತಾಲೂಕಿನ ತಾಳ್ಕೆರೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿರುವ 110  ಕೆವಿ ಉಪಸ್ಥಾವರದ ಲೈನನ್ನು ಎಳೆಯಲು ತುಮಕೂರು ಬೃಹತ್ ಕಾಮಗಾರಿ ವಿಭಾಗದವರು ಮಾರ್ಗ ಮುಕ್ತತೆಯನ್ನು ತೆಗೆದುಕೊಳ್ಳುವುದರಿಂದ ಮಾಯಸಂದ್ರ 110-  11 ಕೆವಿ ಉಪಸ್ಥಾವರದಿಂದ ಹೋಗುವ ಎಲ್ಲಾ ಪೂರಕಗಳಿಗೆ ವಿದ್ಯುತ್ ಅಡಚಣೆಯಾಗುವುದರಿಂದ ದಿನಾಂಕ 1-3-13 ರಂದು ಬೆಳಗ್ಗೆ 9 ರಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
ಸರ್ಕಾರಿ ಕೆಲಸಕ್ಕೆ ಅಡ್ಡಿ: ವ್ಯಕ್ತಿಗೆ ಶಿಕ್ಷೆ
ಹಾಸನ:  ಸರ್ಕಾರಿ ಕೆಲಸ ನಿರ್ವಹಣೆ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿದ್ದಲ್ಲದೆ, ಪ್ರಾಣಬೆದರಿಕೆ ಒಡ್ಡಿದ ಆರೋಪಿಗೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ 6 ತಿಂಗಳ  ಸಾದಾ ಶಿಕ್ಷೆ ವಿಧಿಸಿದೆ.  ಹಾಸನ ತಾಲೂಕಿನ ಉಪ್ಪಾರ ಹೊಸಳ್ಳಿಗೆಯ ದಿನೇಶ ಎಂಬಾತನೇ ಶಿಕ್ಷೆಗೆ ಒಳಗಾದವನು.  ಆರೋಪಿ ದಿನೇಶ್ 2007ರ ಡಿ.27 ರಂದು ಸತ್ಯಮಂಗಲ ಗ್ರಾಮದ ಜಮೀನಿನ ಸರ್ವೇ ಕಾರ್ಯದ ವಿಚಾರದಲ್ಲಿ ಹಾಸನ ತಾಲೂಕು ಕಚೇರಿಯಲ್ಲಿ ಭೂಮಾಪಕ ಎ.ಆರ್.ಗಿರೀಶ್ ಹಾಗೂ ದಿನೇಶ್‌ಕುಮಾರ್  ಅವರೊಂದಿಗೆ ಜಗಳ ತೆಗೆದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಅಲ್ಲದೆ ಎ.ಆರ್.ಗಿರೀಶ ಅವರನ್ನು ಕಚೇರಿಯೊಳಗೆ ಎಳೆದಾಡಿ ಇಬ್ಬರನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೆ ಸರ್ಕಾರಿ ಕೆಲಸ ನಿರ್ವಹಣೆಗೆ ಅಡ್ಡಿ ಉಂಟುಮಾಡಿದ್ದರು ಎಂದು ಬಡಾವಣಾ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.  ವಿಚಾರಣೆ ನಡೆಸಿದ  ಪ್ರಧಾನ ಸಿವಿಲ್ ನ್ಯಾಯಾಧೀಶ  ಮತ್ತು ಜೆ.ಎಮ್‌ಎಫ್.ಸಿ. ನ್ಯಾಯಾಲಯ ನ್ಯಾಯಾಧೀಶ ಕೆ.ಲಕ್ಷ್ಮಿನಾರಾಯಾಣ ಭಟ್ ಆರೋಪ ಸಾಕ್ಷ್ಯಾಧಾರಗಳಿಂದ ಸಾಬೀತಾದ ಹಿನ್ನೆಲೆಯಲ್ಲಿ ದಿನೇಶ್‌ಗೆ 6 ತಿಂಗಳ  ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ  ಪ್ರಕಾಶ್ ಶೇಖರಪ್ಪ ಸುಂಕದ ವಾದ ಮಂಡಿಸಿದ್ದರು.
ಲಿಂಬಾವಳಿ ಪ್ರಚಾರ
ಹಾಸನ: ಸ್ಥಳೀಯ ಸಂಸ್ಥೆ ಚುನಾವಣೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ. 35 ವಾರ್ಡ್‌ಗಳನ್ನು ಹೊಂದಿರುವ ನಗರಸಭೆ ಚುನಾವಣೆಯು ಮಾ.7ರಂದು ನಡೆಯಲಿದ್ದು, ಈಗಾಗಲೇ ಕಣದಲ್ಲಿ ಇರುವ ಎಲ್ಲಾ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಬೆಂಬಲಿಗರು ಮತ್ತು ಅಭಿಮಾನಿಗಳು ನಗರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.
ಪ್ರಣಾಳಿಕೆ ಬಿಡುಗಡೆ: ಗುರುವಾರ ನಗರದ ಹೇಮಾವತಿ ಪ್ರತಿಮೆ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು.  ಹೇಮಾವತಿ ಪ್ರತಿಮೆಯಿಂದ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಪಕ್ಷದ ಅಭ್ಯರ್ಥಿಗಳು, ಕಾರ್ಯಕರ್ತರು, ಅಭಿಮಾನಿಗಳು ಬೈಕ್ ರ್ಯಾಲಿ ಪ್ರಾರಂಭಿಸಿ, ಗಮನ ಸೆಳೆದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments