ಚುನಾವಣೆ ಜನಾದೇಶ ಅಲ್ಲ: ಸಿದ್ದು
ಹಾಸನ: ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ಜನಾದೇಶವೂ ಅಲ್ಲ, ದಿಕ್ಸೂಚಿಯೂ ಅಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಪಾದನೆ ಮಾಡಿದ್ದಾರೆ.
ಅರಕಲಗೂಡಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಒಟ್ಟು ಶೇ.30 ರಷ್ಟು ನಗರ ಮತ್ತು ಪಟ್ಟಣ ಮತದಾರರು ಮಾತ್ರ ಸ್ಥಳೀಯ ಸಂಸ್ಥೆಗಳಲ್ಲಿ ಹಕ್ಕು ಚಲಾವಣೆ ಮಾಡುತ್ತಿದ್ದಾರೆ. ಹೀಗಾಗಿ ಲೋಕಲ್ಬಾಡಿ ಚುನಾವಣೆ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಯಾಗದು. ಆದರೆ ಜನರ ನಾಡಿಮಿಡಿತ ಎನಿದೆ ಎಂಬುದು ಕೊಂಚ ಮಟ್ಟಿಗೆ ತಿಳಿಯಲಿದೆ ಎಂದರು.
ಬೇರೆ ಬೇರೆ ಪಕ್ಷಗಳಿಂದ ಕಾಂಗ್ರೆಸ್ಗೆ ಬರುವವರೆಲ್ಲರನ್ನೂ ಸೇರಿಸಿಕೊಳ್ಳುವುದಿಲ್ಲ. ಯಾರು ಬೇಕು, ಯಾರು ಬೇಡ ಅನ್ನೋದನ್ನು ಹೈಕಮಾಂಡ್ ನಿರ್ಧರಿಸಲಿದೆ.
ಈಗಾಗಲೇ ಕಾಂಗ್ರೆಸ್ ಸೇರುತ್ತೇವೆ ಎಂದು ಅರ್ಜಿ ಹಾಕಿರುವವರ ಹೆಸರುಗಳನ್ನು ಹೈಕಮಾಂಡ್ಗೆ ಕಳಿಸಲಾಗಿದ್ದು, ಈ ವಿಷಯದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ ಎಂದು ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.