ಮಿತಿ ಮೀರಿ ವೆಚ್ಚ ಮಾಡಿದರೆ ಕಾನೂನು ಕ್ರಮ: ವೀಕ್ಷಕ ನರಸಿಂಹಮೂರ್ತಿ
ಚನ್ನರಾಯಪಟ್ಟಣ: ಪುರಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳು ಹಾಗೂ ಪಕ್ಷದಿಂದ ಮಿತಿ ಮೀರಿ ವೆಚ್ಚ ಮಾಡಿದರೆ ಅದಕ್ಕೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಚುನಾವಣಾ ವೀಕ್ಷಕ ನರಸಿಂಹಮೂರ್ತಿ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ಚುನಾವಣಾ ನೀತಿ ಸಂಹಿತೆ ಕುರಿತು ಅಭ್ಯರ್ಥಿಗಳಿಗೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಪ್ರತಿ ನಿತ್ಯ ತಾವು ಮಾಡಿದ ವೆಚ್ಚದ ವಿವರ ನೀಡಬೇಕು.
ಸಾರ್ವಜನಿಕವಾಗಿ ಊಟ ಹಾಗೂ ಇತರೆ ವ್ಯವಸ್ಥೆ ಮಾಡಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಉಡುಗೊರೆ ನೀಡುವುದು, ತಮ್ಮ ವಿರುದ್ಧ ಸ್ಪರ್ಧಿಸಿರುವ ಅಭ್ಯರ್ಥಿಗಳ ವಿರುದ್ಧ ಆಕ್ಷೇಪಣಾ ಭಾಷಣ ಮಾಡುವುದು ಖಂಡನೀಯ ಎಂದು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.