ಹಾಸನ

'ಜೆಡಿಎಸ್ ಟೀಕಿಸುವ ನೈತಿಕತೆ ವಿಶ್ವನಾಥ್‌ಗಿಲ್ಲ'

ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ರಾಜಕೀಯವಾಗಿ ಹತಾಶಗೊಂಡಿರುವ ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ಅನಗತ್ಯ ಟೀಕೆಗಳನ್ನು ಮಾಡುತ್ತಿರುವುದು ವ್ಯರ್ಥ ಪ್ರಯತ್ನ. ಅವರು ಟೀಕೆ ಮಾಡುವ ನೈತಿಕತೆಯನ್ನು ಉಳಿಸಿಕೊಂಡಿಲ್ಲ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
 ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವನಾಥ್ ಹತಾಶ ಮನೋಭಾವದಿಂದ ದೇವೇಗೌಡರ ವಿರುದ್ಧ ಟೀಕೆ ಮಾಡಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅವರು ಆರೋಪಗಳನ್ನು ಮಾಡುವಂತಹ ನೈತಿಕತೆಯನ್ನು ಉಳಿಸಿಕೊಂಡಿಲ್ಲ ಹಾಗೂ ಈ ಆರೋಪಗಳು ಸತ್ಯಕ್ಕೆ ದೂರವಾಗಿದೆ ಎಂದರು.   
 ವಿಶ್ವನಾಥ್ ಅವರಿಗೆ ರಾಜಕೀಯ ಪಾಠ ಹೇಳಿಕೊಟ್ಟ ಗುರು ದೇವೇಗೌಡರು. ಕೇವಲ ನಾನಾ ಸಂಘಟನೆಯಲ್ಲಿ ಮುಳುಗಿದ್ದ ಅವರನ್ನು ದೇವೇಗೌಡರು ಜನಪ್ರತಿನಿಧಿಯನ್ನಾಗಿಸಿ ರಾಜಕೀಯ ಪಾಠ ಕಲಿಸಿದರು. ಆದರೆ ಈಗ ಅವರ ವಿರುದ್ಧವೇ ಅನಗತ್ಯ ಆರೋಪಗಳನ್ನು ಮಾಡಿತ್ತಿದ್ದಾರೆ ಎಂದ ಅವರು, ರಾಷ್ಟ್ರ ನಾಯಕರಾಗಿರುವ ದೇವೇಗೌಡರು ಕೇವಲ ಒಂದೇ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಕಳೆದ ಹಲವು ವರ್ಷಗಳಿಂದ ಆಲೂರು-ಸಕಲೇಶಪುರ-ಕಟ್ಟಾಯ ಕ್ಷೇತ್ರಕ್ಕೆ ಭೇಟಿ ನೀಡಿ ಹಲವು ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವಲ್ಲಿ ಶ್ರಮಿಸಿದ್ದಾರೆ.
24 ವರ್ಷದಿಂದ ನೆನೆಗುದಿಗೆ:   ಸಂಸದರ ಅವಧಿ ಇನ್ನೂ ಒಂದೂವರೆ ವರ್ಷ ಬಾಕಿ ಇದ್ದು, ಕ್ಷೇತ್ರಕ್ಕೆ ಸಾಕಷ್ಟು ಬಾರಿ ಭೇಟಿ ನೀಡಲಿದ್ದಾರೆ ಎಂದ ಅವರು, ಸಕಲೇಶಪುರದ ಬೈಪಾಸ್ ರಸ್ತೆ ಯೋಜನೆ 24 ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ದೇವೇಗೌಡರೇ ಈಗ ಮುತುವರ್ಜಿವಹಿಸಿ ಕೇಂದ್ರ ಸರ್ಕಾರದಿಂದ  48 ಕೋಟಿ ರು. ಅಂದಾಜಿನ ಯೋಜನೆಗೆ ಶ್ರಮಿಸಿದ್ದಾರೆ. ಸದ್ಯದಲ್ಲೇ ಹಣ ಬಿಡುಗಡೆಯಾಗಲಿದೆ. ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ತಿಳಿಸಿದರು.
ತಿರುಗೇಟು:   ಜೆಡಿಎಸ್ ಜಿಲ್ಲಾಧ್ಯಕ್ಷ ಎಚ್.ಕೆ.ಜವರೇಗೌಡ ಮಾತನಾಡಿ, ಪಕ್ಷದಲ್ಲಿ ಅಧಿಕಾರ ಅನುಭವಿಸಿ ಈಗ ಪಕ್ಷ ತೊರೆದು ತಮ್ಮ ನಾಯಕ ವಿರುದ್ಧ ಟೀಕೆ ಮಾಡುತ್ತಿರುವ ಎಚ್.ಎಂ.ವಿಶ್ವನಾಥ್ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ, ಅಲ್ಲದೆ ಅವರನ್ನು ನಾವು ಒಂದು ಶಕ್ತಿ ಅಂತ ಪರಿಗಣಿಸಿಲ್ಲ ಎಂದರು.
 ವಿಶ್ವನಾಥ್ ಅವರು ಜೆಡಿಎಸ್ ಬಲದಿಂದ ಶಾಸಕರಾಗಲು ಸಾಧ್ಯವಾಯಿತೇ ವಿನಹ ಸ್ವಂತ ಶಕ್ತಿಯಿಂದಲ್ಲ. ಈಗ ಪಕ್ಷ ತೊರೆದಿರುವ ಅವರು ಕೇವಲ 500ರಿಂದ 1000 ಮತಗಳನ್ನು ಕಡಿಮೆ ಮಾಡುವ ಸಾಮರ್ಥ್ಯ ಅವರಿಗಿಲ್ಲ ಎಂದು ತಿರುಗೇಟು ನೀಡಿದರು.  ಅಲ್ಲದೇ ಅವರಿಗೆ ನೈತಿಕತೆ ಹಾಗೂ ಶಕ್ತಿ ಇದ್ದರೆ ಅವರ ಜೊತೆ ಗುರುತಿಸಿಕೊಂಡಿರುವ ಜಿಲ್ಲಾ ಪಂಚಾಯ್ತಿ ಸದಸ್ಯ ಬೈರಮುಡಿ ಚಂದ್ರು, ಮತ್ತು ಮಂಜಮ್ಮ ಅವರ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ ಎಂದು ಸವಾಲು ಹಾಕಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ  ಯಾವುದಾದರೂ ಕ್ಷೇತ್ರದಲ್ಲಿ ಮಹಿಳೆಯರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಾಯಕ್ಕೆ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ನಿರ್ಧರಿಸಲಿದ್ದಾರೆ ಎಂದು ಹೇಳಿದರು.
 ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಎಸ್.ದ್ಯಾವೇಗೌಡ, ಯುವ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ರಘು, ಆಲೂರು ತಾ. ಜೆಡಿಎಸ್ ಅಧ್ಯಕ್ಷ ಮಂಜೇಗೌಡ, ತಾಪಂ ಮಾಜಿ ಅಧ್ಯಕ್ಷ ಬೆಕ್ಕನಹಳ್ಳಿ ನಾಗರಾಜ್.                   

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video