ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮುಖ್ಯಮಂತ್ರಿ ಶೆಟ್ಟರ್ ಬಜೆಟ್ ಮಂಡಿಸುತ್ತಾರೆ: ಶಾಸಕ ಕುಮಾರಸ್ವಾಮಿ

Parashurama
Updated On : 23 Jan 2013, 9:34 am

ಹಾಸನ: ವೈಯಕ್ತಿಕ ಹಿತ ಸಾಧನೆಗಾಗಿ ಕೆಲ ಮಂತ್ರಿಗಳು ರಾಜಿನಾಮೆ ನೀಡಿದಾಕ್ಷಣ ರಾಜ್ಯ  ಸರ್ಕಾರಕ್ಕೆ ಏನೂ ಅಪಾಯವಾಗದು. ಸಿಎಂ ಜಗದೀಶ್ ಶೆಟ್ಟರ್ ಬಜೆಟ್ ಮಂಡಿಸುತ್ತಾರೆ ಎಂಬ ವಿಶ್ವಾಸವನ್ನು ಮೂಡಿಗೆರೆ ಬಿಜೆಪಿ ಶಾಸಕ ಎಂ. ಪಿ. ಕುಮಾರಸ್ವಾಮಿ ವ್ಯಕ್ತಪಡಿಸಿದರು.
 ರಾಜ್ಯದಲ್ಲಿ ಬರಗಾಲ ಭೀಕರವಾಗಿದ್ದರೂ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದು, ಮತದಾರರ ಸಂಕಷ್ಟ ಆಲಿಸಬೇಕಾದ ಶಾಸಕರೆ ರಾಜಿನಾಮೆ ನೀಡುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ವಿಷಾದನೀಯ. ಓಟು ಕೊಟ್ಟ ಮತದಾರರ ಎಂದಿಗೂ ಒಪ್ಪಲಾರ ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಸಮಾಧಾನ ವ್ಯಕ್ತಪಡಿಸಿದರು.  
 ಇದೇ ವೇಳೆ ತಾವು ಕೆಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ ಕುಮಾರಸ್ವಾಮಿ, ರಾಜ್ಯದಲ್ಲಿ ಬರಗಾಲ ಇರುವುದರಿಂದ ಮಳೆಗಾಲ ಬರುವವರೆಗೂ ಚುನಾವಣೆ ನಡೆಸಬಾರದು ಎಂದು ಸರಕಾರ ಮತ್ತು ಚುನಾವಣಾ ಆಯೋಗಕ್ಕೆ ಶಾಸಕರು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments