ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವ್ಯವಸ್ಥಿತ ಚುನಾವಣೆ, ಆಯೋಗದ ಉದ್ದೇಶ

Parashurama
Updated On : 25 Jan 2013, 9:29 am

ಹಾಸನ: ರಾಷ್ಟ್ರೀಯ ಮತದಾರರ ದಿನಾಚರಣೆ ನಗರದಲ್ಲಿ ಶುಕ್ರವಾರ ಆಚರಿಸಲಾಯಿತು.
ಜಿಲ್ಲಾಡಳಿತದಿಂದ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಶುಕ್ರವಾರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಹಾಲಪ್ಪನವರು ಉದ್ಘಾಟಿಸಿದರು.
 ಚುನಾವಣಾ ವ್ಯವಸ್ಥೆ ದೇಶದಲ್ಲಿ ವ್ಯವಸ್ಥಿತವಾಗಿ ನಡೆಯಬೇಕು ಎಂಬುದು ಭಾರತ ಚುನಾವಣಾ ಆಯೋಗದ ಉದ್ದೇಶ. 18 ವರ್ಷ ತುಂಬಿದ ಪ್ರತಿಯೊಬ್ಬರು ಸಹ ಮತ ಚಲಾಯಿಸುವಂತಹ ಹಕ್ಕನ್ನು ಪಡೆದುಕೊಳ್ಳುತ್ತಾರೆ ಎಂದು ಹೇಳಿದರು.  ಮತದಾರರು ತಾವು ಆರಿಸುವಂತಹ ವ್ಯಕ್ತಿಗಳನ್ನು ಬಹಳ ಪ್ರಜ್ಞಾಪೂರ್ವಕವಾಗಿ ಆರಿಸುವಂತಹ ಶಕ್ತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.   ಜಿಲ್ಲಾಧಿಕಾರಿ ಕೆ.ಪಿ.ಮೋಹನ್‌ರಾಜ್ ಹೆಚ್ಚುವರಿ ಜಿಲ್ಲಾಧಿಕಾರಿ ಗೋಪಾಲಕೃಷ್ಣ, ತಹಸೀಲ್ದಾರ್ ಮಂಜುನಾಥ್ ನಗರಸಭೆ ಆಯುಕ್ತ ನಾಗಭೂಷಣ್, ಹೊಳೆನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ನಾಗೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments