ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಹೊಳೆನರಸೀಪುರದಲ್ಲಿ...

Parashurama
Updated On : 25 Jan 2013, 9:29 am

ಹೊಳೆನರಸೀಪುರ: ಪ್ರತಿಯೊಬ್ಬ ನಾಗರಿಕರೂ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಂಡಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಿ ಉಳಿಯಲು ಸಾಧ್ಯ ಎಂದು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶ ಡಿ.ಕಂಬೇಗೌಡ ಹೇಳಿದರು.
 ಅವರು ಶುಕ್ರವಾರ ಪಟ್ಟಣದ ಪುರಸಭಾ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನರಲ್ಲಿ ಮತದಾನದ ಮಹತ್ವ, ಜವಾಬ್ದಾರಿ ಹಾಗೂ ಮತದಾನದ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕೇಂದ್ರ ಚುನಾವಣಾ ಆಯೋಗವು ರಾಷ್ಟ್ರೀಯ ಮತದಾರರ ದಿನಾಚರಣೆ ಜಾರಿಗೆ ತಂದಿದೆ ಎಂದರು.  ಮುಖ್ಯ ಅತಿಥಿ ಸಹಾಯಕ ಸರ್ಕಾರಿ ಅಭಿಯೋಜಕ ಮಲ್ಲಕಾರ್ಜುನ ದೊಡ್ಡಗೌಡ್ರ ಅವರು, ಮತದಾರರ ದಿನವನ್ನು ಒಂದು ಜಾಗೃತ ದಿನವನ್ನಾಗಿ ಪರಿಗಣಿಸಿ ಆಚರಿಸುವ ಮೂಲಕ ನಮ್ಮ ಒಂದು ಮತ ದೇಶದ ನಿರ್ಣಾಯಕ ಮತ ಎಂಬ ಪರಿಕಲ್ಪನೆಯ ಅರಿವನ್ನು ಎಲ್ಲ ಮತದಾರರಲ್ಲೂ ಮೂಡಿಸುವ ಅವಶ್ಯಕತೆ ಇದೆ ಎಂದರು.   ಪ್ರಧಾನ ಉಪನ್ಯಾಸ ನೀಡಿದ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕ ಎ.ಎಸ್.ಗಿರೀಶ್ ಮತವು ದಾನವಾಗಬೇಕೆ ಹೊರತು, ಮಾರಾಟದ ವಸ್ತುವಾಗಬಾರದು ಎಂದು ಎಚ್ಚರಿಸಿದರು.
 ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಅಧ್ಯಕ್ಷತೆ ತಹಸೀಲ್ದಾರ್ ಈಶ್ವರಪ್ಪ ವಹಿಸಿದ್ದರು. ಪುರಸಭಾಧ್ಯಕ್ಷೆ ವಿನೋದ, ಸರ್ಕಾರಿ ಪ್ರಥಮ ಧರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಬಿ.ಇರ್ಷಾದ್ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments