ದೂರು ನಿವಾರಣಾ ಕೋಶ ಕಚೇರಿಗೆ ಚಾಲನೆ
ಹಾಸನ: ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರಂಭಿಸಿದ ಸಾರ್ವಜನಿಕರ ದೂರು ನಿವಾರಣಾ ಕೋಶ ಉದ್ಘಾಟಿಸಿ ದರು.
ಸಾರ್ವಜನಿಕರು ಯಾವುದೇ ಇಲಾಖೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ, ಜಿಲ್ಲಾಧಿಕಾರಿ ವೈಬ್‌ಸೈಟ್ ವಿಳಾಸ ಡಿಡಿಠ//ಡಡ್ಜಿ3.್ಞಛ್ಠ.ಟ್ಝ್ಛಿ.್ಝಟಿ.ಝ್ಜ್ಠ್ಛಡಟಿ ಇಲ್ಲಿಗೆ ದೂರು ಸಲ್ಲಿಸಬಹುದಾಗಿದೆ.
ಈ ನಿಟ್ಟಿನಲ್ಲಿ ದೂರುಗಳನ್ನು ಸಂಬಂಧಪಟ್ಟ ಇಲಾಖೆಗೆ ನೇರ ಕಳುಹಿಸಲಾಗುವುದು. ಈ ವ್ಯವಸ್ಥೆಯಿಂದ ತ್ವರಿತವಾಗಿ ದೂರು ಅರ್ಜಿಗಳು ವಿಲೇವಾರಿಯಾಗಲಿವೆ.
ಅಲ್ಲದೆ, ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಗತಿಯನ್ನು ಮೇಲ್ಕಂಡ ವೆಬ್‌ಸೈಟ್ ವಿಳಾಸದಲ್ಲಿ ಖಾತ್ರಿ ಪಡಿಸಿಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಮೈಸೂರು ವಿಭಾಗದ 8 ಜಿಲ್ಲೆಗಳಲ್ಲಿ ಈ ಸಾರ್ವಜನಿಕ ದೂರು ನಿವಾರಣಾ ಕೋಶ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್‌ಸಿಂಗ್, ಉಪ ವಿಭಾಗಾಧಿಕಾರಿ ಜಗದೀಶ್, ತಹಸೀಲ್ದಾರ್ ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನವಿಲೆ ಅಣ್ಣಪ್ಪ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ ಹಾಗೂ ನಾನಾ ಅಧಿಕಾರಿಗಳು ಸೇರಿದಂೆತ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.