ಅಂಗಡಿ ಮಾಲೀಕರ ಆಕ್ಷೇಪ
ಬೇಲೂರು: ಇಲ್ಲಿನ ಮುಖ್ಯರಸ್ತೆ ಅಗಲೀಕರಣಕ್ಕೆ ಸರ್ವೆ ಕಾರ್ಯ ನಡೆಯುತ್ತಿರುವ ಸಂದರ್ಭದಲ್ಲಿ ಕೆಲ ವರ್ತಕರು ಹಾಗೂ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದರಿಂದ ಅಧಿಕಾರಿಗಳು ವಾಪಸ್ ಹೋದ ಘಟನೆ ಮಂಗಳವಾರ ಸಂಜೆ ನಡೆಯಿತು.ಪಟ್ಟಣದ ಜೆ.ಪಿ.ನಗರದಲ್ಲಿ ಬೆಳಗಿನಿಂದ ಸರ್ವೆ ಕಾರ್ಯ ಆರಂಭಿಸಿದಾಗ ಸರ್ಕಲ್ ಬಳಿ ಇರುವ ಅಂಗಡಿ ಮಾಲೀಕರು ಸರ್ವೆ ಕಾರ್ಯ ಸಮರ್ಪಕವಾಗಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮುಖ್ಯ ರಸ್ತೆಯ ಒಂದು 13 ಮೀಟರ್ ಅಳದೆರೆ ಇನ್ನೊಂದು ಬದಿ 10 ಮೀಟರ್ ಅಳತೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು. ಅಲ್ಲದೆ ಸರ್ವೆ ಕಾರ್ಯ ಕೆನರಾ ಬ್ಯಾಂಕಿನ ಬಳಿ ಬಂದಾಗ ಕೆಲ ವರ್ತಕರು ಹಾಗೂ ಸಾರ್ವಜನಿಕರು ಸರ್ವೆ ಮಾಡುತ್ತಿದ್ದವರ ಮೇಲೆ ಹರಿಹಾಯ್ದರು. ಸರ್ವೆ ಮಾಡುತ್ತಿದ್ದವರು ಹಾಗೂ ವರ್ತಕರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಕೊನೆಗೆ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ವರ್ತಕರಲ್ಲೇ ಗೊಂದಲ: ವರ್ತಕರು ಸರ್ವೆ ಕಾರ್ಯ ಸಮರ್ಪಕವಾಗಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದರೆ, ಮತ್ತೆ ಕೆಲ ವರ್ತಕರು ಅಭಿವೃದ್ಧಿಗೆ ರಸ್ತೆ ಅಗಲೀಕರಣ ನಡೆಯಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.