ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಆದಿಶ್ರೀ ಪುಣ್ಯಸ್ಮರಣೆ: ವಿಶೇಷ ಪೂಜೆ

Parashurama
Updated On : 29 Jan 2013, 10:09 am

ಅರಸೀಕೆರೆ: ಲಿಂಗೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ ಪುಣ್ಯಾರಾಧನೆ ಪ್ರಯುಕ್ತ ಸೋಮವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಶ್ರೀಗಳ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಇದೆ ಸಂದರ್ಭ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಕ್ತವೃಂದಕ್ಕೆ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.ವಿಶ್ವ ಹಿಂದೂ ಪರಿಷತ್ ಮುಖಂಡ ಕಟ್ಟೇಹಳ್ಳಿ ನವೀನ್ ಕುಮಾರ್ ಮಾತನಾಡಿ ದೀನ ದಲಿತರು, ಅಸಹಾಯಕರು, ವಯೋವೃದ್ಧರು, ಕಡು ಬಡವರ ಆರೋಗ್ಯ ರಕ್ಷಣೆಗೆ ಆದಿಚುಂಚನಗಿರಿ ಬಾಲಗಂಗಾಧರನಾಥ ಸ್ವಾಮೀಜಿ ಸೇವೆ ಅಪಾರ. ಶಿಕ್ಷಣ ಕ್ಷೇತ್ರದಲ್ಲಿ ಇವರ ಕೊಡುಗೆ ಅನನ್ಯ. ಜ್ಞಾನದಾಸೋಹದ ಮೂಲಕ ಜನರನ್ನು ಸನ್ಮಾರ್ಗದಲ್ಲಿ ಕೊಂಡೊಯ್ದವರು ಎಂದು ತಿಳಿಸಿದರು.ಶಾಸಕ ಕೆ.ಎಂ.ಶಿವಲಿಂಗೇಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಕನ್ನಡ ಪಡೆ ರಾಜ್ಯಾಧ್ಯಕ್ಷ ಬೋರೆಹಳ್ಳಿ ವೆಂಕಟೇಶ್ ಮತ್ತಿತರರು ಮಾತನಾಡಿದರು. ಗಣೇಶ್, ಪ್ರಶಾಂತ್, ಮಂಜುನಾಥ್ ಇನ್ನಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments