ಇಂದು ಹುತಾತ್ಮರ ದಿನಾಚರಣೆ
ಹಾಸನ: ಸರ್ವೋದಯ ಸಮಿತಿ, ಜಿಲ್ಲಾ ವಾರ್ತಾ ಇಲಾಖೆ ಮತ್ತು ಮಹಿಳಾ ಪದವಿ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ 30 ರಂದು 11.30ಕ್ಕೆ ನಗರದ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಾಂಶುಪಾಲ ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ.ಶಿವಣ್ಣ, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚದ್ರ, ಜಿಲ್ಲಾ ಅಗ್ನಿ ಶಾಮಕ ದಳದ ಅಧಿಕಾರಿ ಪಾಲ್ಗೊಳ್ಳಲಿದ್ದಾರೆ.
ಇಂದು ಪ್ರೌಢಶಾಲೆ ಲೋಕಾರ್ಪಣೆ
ಹಾಸನ: ಜಿಲ್ಲಾ ಪಂಚಾಯ್ತಿ, ಸಕಲೇಶಪುರ ತಾಲೂಕು ಪಂಚಾಯ್ತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ದೇವಾಲದಕೆರೆಯ ಸರ್ಕಾರಿ ಪ್ರೌಢಶಾಲೆ ಕಟ್ಟಡದ ಉದ್ಘಾಟನೆ ಹಾಗೂ ಶಾಲಾ ವಾರ್ಷೀಕೋತ್ಸವ ಸಮಾರಂಭ 30 ರಂದು ಬೆಳಿಗ್ಗೆ 10ಕ್ಕೆ ಏರ್ಪಡಿಸಲಾಗಿದೆ. ಮಾಜಿ ಪ್ರಧಾನಿ ಹಾಗೂ ಹಾಲಿ ಸಂಸದ ಎಚ್.ಡಿ.ದೇವೇಗೌಡರು, ಜಿಲ್ಲಾ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ, ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಉಪಸ್ಥಿತರಿವರು. ಸ್ಥಳೀಯ ಶಾಸಕ ಎಚ್.ಕೆ.ಕುಮಾರಸ್ವಾಮಿ ಶಾಲಾ ಕಟ್ಟಡದ ಉದ್ಘಾಟನೆ ನೆರವೇರಿಸುವರು. ದೇವಾಲದಕೆರೆ ಗ್ರಾಪಂ ಅಧ್ಯಕ್ಷ ಸುಧೀಶ್ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಮತಪಟ್ಟಿ: ಹೆಸರು ನೋಂದಾಯಿಸಿ
ಬೇಲೂರು: 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ತಮ್ಮ ಹೆಸರು ನೋಂದಾಯಿಸಿಕೊಂಡು ಕಡ್ಡಾಯವಾಗಿ ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿ ಪಡೆಯುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ಶೆಟ್ಟಿ ತಿಳಿಸಿದ್ದಾರೆ. ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ಏರ್ಪಡಿಸಿದ್ದ 'ಮತದಾರರ ಜಾಗೃತಿ' ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಉತ್ತಮ ವ್ಯಕ್ತಿಯ, ಸಾಮಾಜಿಕ ಕಳಕಳಿ ಯಿರುವ ಜನರ ಸಮಸ್ಯೆಗಳಿಗೆ ಸ್ಪಂದಿಸುವ ವ್ಯಕ್ತಿ ಆಯ್ಕೆ ಮಾಡುವ ಮೂಲಕ ಸದೃಢ ಸಮಾಜ ನಿರ್ಮಿಸಬೇಕು ಎಂದು ಕಿವಿಮಾತು ಹೇಳಿದರು. ಸುಂದರಮ್ಮ, ಲಕ್ಷ್ಮಿವೆಂಕಟೇಶ್ ಉಪಸ್ಥಿತರಿದ್ದರು.
ಚನ್ನಯ್ಯ ಅಗಲಿಕೆಗೆ ಜೆಡಿಎಸ್ ಶ್ರದ್ಧಾಂಜಲಿ
ಹಾಸನ: ತಾಲೂಕು ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಚನ್ನಯ್ಯ ಅಕಾಲಿಕ ನಿಧನ ಸಮಾಜ ದಕ್ಷ ನಾಯಕನನ್ನು ಕಳೆದು ಕೊಂಡಾಂತಾಗಿದೆ ಎಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ತಾಲೂಕಿನ ಆನೆಮಹಲ್ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.