ಜಮೀನು ವಿವಾದ: ವ್ಯಕ್ತಿ ಮೇಲೆ ಹಲ್ಲೆ
ಹಾಸನ: ಜಮೀನು ವಿಷಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನ ಮೇಲೆ ತೀವ್ರ ಹಲ್ಲೆ ಮಾಡಲಾಗಿದ್ದು, ಹಲ್ಲೆಗೊಳಗಾದ ವ್ಯಕ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಲೂಕಿನ ದುದ್ದ ಹೋಬಳಿ ಹೆರಗು ಬೈರಾಪುರ ಗ್ರಾಮದ ನಿವಾಸಿ ರಂಗೇಗೌಡರ ಮಗ ಹೆಚ್.ಆರ್. ರವಿ ಎಂಬಾತ ಹಲ್ಲೆಗೆ ಒಳಗಾಗಿ ತಪ್ಪಿಸಿ ಕೊಂಡು ಬಂದು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕಿ.
ಸೋಮೇಗೌಡ ಮತ್ತು ಆತನ ಸ್ನೇಹಿತರು ರವಿ ಮದ್ಯಪಾನ ಮಾಡಲು ಕರೆದ ಸಮಯದಲ್ಲಿ ವಂಚಕರ ಮರ್ಮ ತಿಳಿದು ನನಗೆ ಆರೋಗ್ಯ ಸರಿಯಾಗಿಲ್ಲ ಎಂದು ಮದ್ಯಪಾನ ನಿರಾಕರಿಸಿದಾಗ ಯರೇಹಳ್ಳಿ ದೇವಾಲಯದ ಬಳಿ ಆತನ ಮೇಲೆ ಬ್ಲೇಡ್ ಸೇರಿದಂತೆ ಇತರೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ರವಿ ದೂರಿದ್ದಾರೆ. ಬ್ಲೇಡ್ನಿಂದ ಕೈ ಕೊಯ್ದಿದ್ದು, ತೀವ್ರ ರಕ್ತ ಸ್ರಾವವಾಗಿದೆ. ಹಲ್ಲೆ ಮಾಡಿದ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಬಂದ ರವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರವಿ ತಮ್ಮ ದೂರಿನಲ್ಲಿಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ಆರೋಪ ವ್ಯಕ್ತಪಡಿಸಿದರು. ಈಗಾಗಲೇ ಹಲ್ಲೆಗೊಳಗಾದ ರವಿ ದುದ್ದ ಪೊಲೀಸರು ವಿಚಾರಣೆ ನಡೆಸಿ ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.