ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಟ್ರ್ಯಾಕ್ಟರ್ ಪಲ್ಟಿ: ಚಾಲಕ ಸಾವು

Parashurama
Updated On : 29 Jan 2013, 10:11 am

ಹಾಸನ: ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ತಾಲೂಕಿನ ಕಟ್ಟಾಯ ಹೋಬಳಿ ಜಿನ್ನೇನಹಳ್ಳಿ ಗ್ರಾಮದ ಬಳಿ ಸೋಮವಾರ ನಡೆದಿದೆ.
ಚನ್ನರಾಯಪಟ್ಟಣ ತಾಲೂಕಿನ ಗೊಲ್ಲರಹೊಸಳ್ಳಿ ಗ್ರಾಮದ ಸ್ವಾಮಿ ಮೃತಪಟ್ಟ ದುರ್ದೈವಿ.ಈ ಸಂಬಂಧ ಗೊರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ: ಬೈಕ್ ಸವಾರ ಸಾವು
ಅರಸೀಕೆರೆ: ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ, ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಗೀಜಿಹಳ್ಳಿ ಗ್ರಾಮದ ಬಳಿ ಸೋಮವಾರ ನಡೆದಿದೆ.ಪಟ್ಟಣದ ಮಾರುತಿನಗರ ವಾಸಿ ಚಂದ್ರಪ್ಪ(58) ಮೃತ ದುರ್ದೈವಿ. ಅವರು ಬೈಕಿನಲ್ಲಿ ಹಂದ್ರಾಳು ಗ್ರಾಮಕ್ಕೆ ಹೋಗಿ ವಾಪಸ್ ಅರಸೀಕೆರೆಯತ್ತ ಆಗಮಿಸಿ ಹಾಸನ-ಅರಸೀಕೆರೆ ರಸ್ತೆ ಗೀಜಿಹಳ್ಳಿ ಗ್ರಾಮದ ಹತ್ತಿರ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂಜು: 2 ಬಂಧನ
ಹಾಸನ: ನಗರದ ಸಂತೇಪೇಟೆ ಗೊರೂರು ವೃತ್ತದಲ್ಲಿ ಮಟ್ಕಾ ಜೂಜಾಟ ಆಡುತ್ತಿದ್ದ ಕೊಟ್ಟಣಗೇರಿ ಬೀದಿಯ ವಾಸಿ ರಂಜು (22) ಎಂಬಾತನನ್ನು ಪೊಲೀಸರು ಬಂಧಿಸಿರುವ ಘಟನೆ ಸೋಮವಾರ ನಡೆದಿದೆ.ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.ಮತ್ತೊಂದು ಪ್ರಕರಣದಲ್ಲಿ ನಗರದ ಕಟ್ಟಿನಕೆರೆ ಮಾರ್ಕೆಟ್ ಶೌಚಾಲಯದ ಬಳಿ ಮಟ್ಕಾ ಜೂಜಾಟಾಡುತ್ತಿದ್ದ ಶಾಂತಿನಗರದ ಅರುಣ (34) ಎಂಬಾತನನ್ನು ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಜಗಳ: ವ್ಯಕ್ತಿ ಕೊಲೆ
ಚನ್ನರಾಯಪಟ್ಟಣ: ಇಬ್ಬರ ನಡುವೆ ಹಣಕಾಸಿನ ವಿಚಾರದಲ್ಲಿ ಜಗಳ  ನಡೆದು, ವ್ಯಕ್ತಿಯೊಬ್ಬ ಕೊಲೆಯಾಗಿರುವ ಘಟನೆ ಪಟ್ಟಣದ ಪ್ರಕೃತಿ ವೈನ್ಸ್‌ನಲ್ಲಿ ಸೋಮವಾರ ಸಂಜೆ ನಡೆದಿದೆ.ರಾಜು ಮೃತಪಟ್ಟ ದುರ್ದೈವಿ. ಅನಂತರಾಜು ಕೊಲೆ ಆರೋಪಿ.
ಈ ಇಬ್ಬರೂ  ಪಟ್ಟಣದ ಪ್ರಕೃತಿ ವೈನ್ಸ್‌ಗೆ ಪ್ರತಿನಿತ್ಯದಂತೆ ಕುಡಿಯಲು ಬಂದಿದ್ದರು. ರಾಜು ತನಗೆ ಕೊಡಬೇಕಾದ ಸಾಲದ ಹಣವನ್ನು ಅನಂತರಾಜು ಹತ್ತಿರ ಕೇಳಿದ್ದಾನೆ. ಆಗ ಇಬ್ಬರಿಗೂ ಮಾತಿಗೆ ಮಾತು ಬೆಳೆದಿದೆ. ಅನಂತರಾಜು ರಾಜನ ಕಪಾಳಕ್ಕೆ ಹೊಡೆದಿದ್ದಾನೆ. ಅಲ್ಲದೆ, ಬಲವಾಗಿ ಎದೆಗೆ ಗುದ್ದಿದಾಗ ರಾಜು ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದಾನೆ. ಕೂಡಲೇ ಅವರನ್ನು  ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ  ಹಾಸನದ ಸರ್ಕಾರಿ ಆಸ್ಪತ್ರೆಗೆ  ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಸಂಬಂಧ ಪಟ್ಟಣ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಮೀಕ್ಷೆಗೆ ಚಾಲನೆ
ಹಾಸನ: ನಗರ ಪ್ರದೇಶಗಳಲ್ಲಿರುವ ಗುಡಿಸಲು ವಾಸಿಗಳು, ವಸತಿ ರಹಿತರು, ನಿವೇಶನ ರಹಿತರ ಕುಟುಂಬಗಳ ಸಮಗ್ರ ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದ್ದು, ಸದರಿ ಸಮೀಕ್ಷಾ ಕಾರ್ಯಕ್ಕೆ ಆಗಮಿಸುವ ನಗರಸಭಾ ಸಿಬ್ಬಂದಿ ವರ್ಗದವರಿಗೆ ಸಹಕರಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ಇಂದು ಕವಿಗೋಷ್ಠಿ
ಹಾಸನ: ನಗರದ ಎವಿಕೆ ಕಾಲೇಜಿನಲ್ಲಿ 30 ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಜಿಲ್ಲಾ ಮಟ್ಟದ ವಿದ್ಯಾರ್ಥಿ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಸಾಹಿತಿಗಳಾದ  ಡಾ.ಕೆ.ಎಸ್.ಭಗವಾನ್, ಎನ್.ಎಲ್.ಚನ್ನೇಗೌಡ ಭಾಗವಹಿಸಲಿದ್ದು, ಇದೆ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಆರ್.ಪಿ.ವೆಂಕಟೇಶ್‌ಮೂರ್ತಿ ಅವರನ್ನು ಸನ್ಮಾನಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
ಇಂದು ಅಣುಕು
ಹಾಸನ:  ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವತಿಯಿಂದ ಜಿಲ್ಲಾ ಕ್ರೀಡಾಂಗಣದ ಹತ್ತಿರವಿರುವ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ 30 ರಂದು  ಅಣುಕು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments