ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ರಸ್ತೆ ಅಪಘಾತ: ಐವರ ದುರ್ಮರಣ

Parashurama
Updated On : 29 Jan 2013, 10:33 am

ಚನ್ನರಾಯಪಟ್ಟಣ: ಶವ ಸಂಸ್ಕಾರಕ್ಕೆ ಹೋಗಿ ಹಿಂತಿರುಗುತ್ತಿದ್ದ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ತಾಲೂಕಿನ ದಂಡಿಗನಹಳ್ಳಿ ಹೋಬಳಿ ನೆಟ್ಟೇಕೆರೆ ಗೇಟ್ ಬಳಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.
ಶ್ರೀರಂಗಪಟ್ಟಣ ಬೀದರ್ ರಸ್ತೆಯ ತಾಲೂಕಿನ ನೆಟ್ಟೇಕೆರೆ ಗೇಟ್‌ಬಳಿ ಬೆಳಗಿನ ಜಾವ 3-3ರ ಸಮಯದಲ್ಲಿ ಲಾರಿ ಹಾಗೂ ಮಾರುತಿ 800 ಕಾರಿನ ಮಧ್ಯೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ.
ಮಂಡ್ಯ ನಗರದ ಚಾಮುಂಡೇಶ್ವರಿ ಬಡಾವಣೆಯ ರಾಮಕೃಷ್ಣ ಭಟ್ (48) ಪತ್ನಿ ಚಂದ್ರಮತಿ (45), ಹಾಗೂ ಚಾಲಕ ಶ್ರೀನಿವಾಸ್ (23) ಸ್ಥಳದಲ್ಲೇ ಮೃತಪಟ್ಟರೆ, ಕೊಳ್ಳೇಗಾಲ ತಾಲೂಕು ಕೊತ್ತನೂರು ಗ್ರಾಮದ ಶ್ರೀನಾಥ್(55) ಹಾಗೂ ಅವರ ಪತ್ನಿ ತಾರಾ(45) ತೀವ್ರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ಕಳಿಹಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತರು ಹೊಸನಗರ ತಾಲೂಕು ಮಾಸ್ತಿಕಟ್ಟೆಯಲ್ಲಿ ನಡೆದ ತಾರಾ ಅವರ ತಂದೆಯ ಅಂತ್ಯ ಸಂಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರಿನಲ್ಲಿ  ವಾಪಸಾಗುತ್ತಿದ್ದ ಸಂದರ್ಭದಲ್ಲಿ ನೆಟ್ಟೇಕೆರೆ ಗೇಟಟ್ಬಳಿ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
ಅತಿ ವೇಗದಲ್ಲಿದ್ದ ಎರಡೂ ವಾಹನಗಳ ಮುಖಾಮುಖಿ ಡಿಕ್ಕಿಯಿಂದ ಮೂರುತಿ 800 ಕಾರು ಲಾರಿಯ ಕೆಳಗೆ ಸಿಕ್ಕಿಕೊಂಡಿದ್ದು, ಕಾರಿನಲ್ಲಿ ಮುಂದೆ ಕುಳಿತಿದ್ದ ಮೃತ ದೇಹ ತೆಗೆಯಲು ಪೊಲೀಸರು ಹಾಗೂ ಸಾರ್ವಜನಿಕರು ಹರಸಾಹಸ ಮಾಡಿದರಾದರೂ ಪ್ರಯತ್ನ ವಿಫಲವಾದಾಗ ಚನ್ನರಾಯಪಟ್ಟಣದಿಂದ ಕ್ರೇನ್ ತರಿಸಿ ಅದರ ಸಹಾಯದಿಂದ ಲಾರಿಯನ್ನು ಹಿಂದಕ್ಕೆ ಎಳೆದ ನಂತರ ಮೃತದೇಹಗಳನ್ನು ಹೊರತೆಗೆಯಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್‌ಸಿಂಗ್, ಸರ್ಕಲ್ ಇನ್‌ಸ್ಪೆಕ್ಟರ್ ಮಾರಪ್ಪ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments