6, 7 ರಿಂದ 11 ರಾತ್ರಿವರೆಗೆ ಮದ್ಯ ಮಾರಾಟ ನಿಷೇಧ
ಹಾಸನ: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಯ ಮತದಾನದ ಪ್ರಯುಕ್ತ ಮಾ.6 ರಂದು ಬೆಳಗ್ಗೆ 7 ರಿಂದ ಮಾ.7ರ ಮಧ್ಯರಾತ್ರಿಯವರೆಗೆ ಹಾಗೂ ಮತ ಎಣಿಕೆ ಪ್ರಯುಕ್ತ ಮಾ.11ರಂದು ಬೆಳಗ್ಗೆ 6 ರಿಂದ ರಾತ್ರಿ 8 ರವರೆಗೆ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆ ಗಡಿಯಿಂದ 3 ಕಿ.ಮೀ. ಪರಿಧಿಯಲ್ಲಿ ಎಲ್ಲ ರೀತಿಯ ಮದ್ಯ ಶೇಖರಣೆ, ತಯಾರಿಕೆ, ಸರಬರಾಜು, ಸಾಗಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ದಿನಗಳಲ್ಲಿ ಮದ್ಯದಂಗಡಿಗಳುನ್ನು ಕಡ್ಡಾಯವಾಗಿ ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ.ಪಿ. ಮೋಹನ್ ರಾಜ್ ಪ್ರಕಟಣೆಯಲ್ಲಿ ಆದೇಶಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.