ಆರ್ಟಿಇ ಅಡಿ 1ನೇ ತರಗತಿ ದಾಖಲಾಗುವ ಪ್ರಕ್ರಿಯೆ ಪೂರ್ಣ
ಹೊಳೆನರಸೀಪುರ: ಪ್ರಸಕ್ತ ಸಾಲಿಗೆ ಆರ್ಟಿ. ಅಡಿಯಲ್ಲಿ ಶೇ.25ರಷ್ಟು ಸರ್ಕಾರಿ ಸೀಟುಗಳನ್ನು ಅನುದಾನಿತ ಹಾಗೂ ಅನುದಾನ ರಹಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ 1ನೇ ತರಗತಿಗೆ ದಾಖಲಾಗಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಫೆ.19ಕ್ಕೆ ಮುಕ್ತಾಯ ಗೊಂಡಿದೆ.
ಶಾಲೆಯವರು ಸ್ವೀಕರಿಸಿದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ, ಆಯ್ಕೆ ಪಟ್ಟಿಯನ್ನು ಮಾ.2ರೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಇಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್ ತಿಳಿಸಿದ್ದಾರೆ.
ಆದ ಕಾರಣ ಆರ್ಟಿಇ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಆಯ್ಕೆ ಸಂಬಂಧವಾಗಿ ಶಾಲೆಯ ಮುಖ್ಯ ಶಿಕ್ಷಕರು ಮಾ.1 ರಿಂದ ಮಾ.4ರವರೆಗೆ ಶಾಲೆಯಲ್ಲಿ ಸಂಬಂಧಿಸಿದ ವಿದ್ಯಾರ್ಥಿಗಳ ಪೋಷಕರು ಕಡ್ಡಾಯವಾಗಿ ಹಾಜರಿರುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.