ಕಾಮಗಾರಿಗಳಲ್ಲಿ ಅವ್ಯವಹಾರ: ಲೋಕಾಯುಕ್ತ ಡಿವೈಎಸ್ಪಿ
ಸಕಲೇಶಪುರ: ಜಿಲ್ಲೆಯಲ್ಲಿ ನಾನಾ ಕಾಮಗಾರಿಯಲ್ಲಿ 40 ಕೋಟಿ ದುರುಪಯೋಗವಾಗಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಸಲಾಗುವುದು ಎಂದು ಲೋಕಾಯುಕ್ತ ಡಿವೈಎಸ್ಪಿ ಶಿವಬಸಪ್ಪ ಹೇಳಿದರು. ಗುರುವಾರ ತಾಪಂಯ ಸಾಮರ್ಥ್ಯ ಸೌಧದಲ್ಲಿ ಗ್ರಾಪಂ ಪಿಡಿಒಗಳು ಹಾಗೂ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿ, ಕಾನೂನು ಬದ್ಧವಾಗಿ ಕಾರ್ಯನಿರ್ವಹಿಸಿದರೆ ಜನರ ಮನ್ನಣೆಗಳಿಸಬಹುದು ಎಂದರು. ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಕಿರುಕುಳವನ್ನು ಸಹಿಸುವುದು ಬೇಡ. ಹೊಂಗಡಹಳ್ಳಿ ಗ್ರಾಪಂಯಲ್ಲಿ 7 ಲಕ್ಷ ದುರುಪಯೋಗವಾಗಿದ್ದು, ಇದನ್ನು ವಾಪಸ್ ಪಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.