ಧರ್ಮದ ಹೆಸರಲ್ಲಿ ಸ್ತ್ರೀ ನಿಯಂತ್ರಣ
ಆಲೂರು: ಕಾನೂನಿನಲ್ಲಿ ಸಮಾನತೆ ಇದ್ದರೂ ಧರ್ಮದ ಹೆಸರಿನಲ್ಲಿ ಸ್ತ್ರೀಯರನ್ನು ನಿಯಂತ್ರಣದಲ್ಲಿ ಇಡಲಾಗಿದೆ ಎಂದು ನ್ಯಾಯಾಧೀಶ ವಿ.ಹನುಮಂತಪ್ಪ ತಿಳಿಸಿದರು.
ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಕಾವೇರಿ ಸಮುದಾಯ ಸಂಘ ಹಾಗೂ ಎಲ್.ವಿ.ಸರ್ಕಾರಿ ಪಾಲಿಟೆಕ್ನಿಕ್ ಆಶ್ರಯದಲ್ಲಿ ನಡೆದ ಮಹಿಳೆಯರ ಸಂರಕ್ಷಣೆ ಬಗ್ಗೆ ಕಾನೂನು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಸ್ತ್ರೀಯರಿಗೆ ಪ್ರತಿಯೊಂದು ಧರ್ಮ ಕೂಡ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ನೀಡದೆ ಪುರುಷ ಹಾಗು ಸ್ತ್ರೀಯರ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದರು.
ವಕೀಲೆ ಪಾರ್ವತಿ ಮಾತನಾಡಿ, ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ಅನ್ಯಾಯವಾಗುತ್ತಿರುವುದನ್ನು ಮನಗಂಡು ಸರ್ಕಾರ ಹೊಸ ಹೊಸ ಕಾನೂನುಗಳನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.
ಸಮಾಜ ಸೇವಕಿ ಶಾಹಿದಾ ಖಾತೂನ್ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಎಂ.ಎಸ್.ಮಹೇಶ್.ಉಪಾಧ್ಯಕ್ಷ ಎಂ.ಎಂ.ಸುನೀಲ್, ವಕೀಲ ಸುರೇಶ್, ಜೀವನ್ ಪ್ರಸಾದ್, ಶ್ರೀನಿವಾಸ್, ಕರಿಯಪ್ಪ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.