ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ನೀರಿಲ್ಲ: ಮಹಿಳೆಯರಿಂದ ಖಾಲಿ ಕೊಡ ಪ್ರದರ್ಶನ

Parashurama
Updated On : 1 Mar 2013, 10:12 am

ಬಾಣಾವರ (ಅರಸೀಕೆರೆ ತಾ.): ಬಾಣಾವರ ಗ್ರಾಮ ಪಂಚಾಯ್ತಿಯ 1 ಮತ್ತು 2ನೇ ವಾರ್ಡ್‌ನಲ್ಲಿ ಸುಮಾರು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಭಣಗೊಂಡಿದ್ದರೂ ಗ್ರಾಪಂ ಆಡಳಿತ ಮಂಡಳಿ ಸ್ಪಂದಿಸುತ್ತಿಲ್ಲವೆಂದು ಸಾರ್ವಜನಿಕರು ಗ್ರಾಮ ಪಂಚಾಯ್ತಿ ಮುಂದೆ ಖಾಲಿ ಕೊಡಗಳನ್ನು ಪ್ರದರ್ಶಿಸಿ, ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ ಪ್ರತಿಭಟನಾಕಾರರು ನೀರಿನ ಸಮಸ್ಯೆಗೆ ಶೀಘ್ರವಾಗಿ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದರು.  ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಗ್ರಾಪಂ ಕಾರ್ಯದರ್ಶಿ ಪರಮೇಶ್ವರಪ್ಪ, ಒಂದು ವಾರದಿಂದ ವಿದ್ಯುತ್ ಪಂಪ್ ಕೆಟ್ಟು ಹೋಗಿ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.  ನಂತರ ಗ್ರಾಪಂ ಸದಸ್ಯರಾದ ಬಿ.ಡಿ. ಮಲ್ಲಿಕಾರ್ಜುನ್ ಶಾಹಿನಾ ಇಮ್ತಿಯಾಜ್, ಆರೀಫ್ ಜಾನ್ ಟ್ಯಾಂಕಿನ ಮೂಲಕ ನೀರು ಪೂರೈಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಈ ಪ್ರತಿಭಟನೆಯಲ್ಲಿ ಸೈಯದ್ ಹನೀಫ್, ಸಬೀನಾ ಬಾನು, ಫಾತಿಮಾಬಾನು, ಜಹೀರ್ ಸಾಬ್, ದೇವರಾಜು, ಭೀಮೋಜಿರಾವ್, ಇಕ್ಬಾಲ್, ಮೂರ್ತಿ, ಅನ್ವರ್ ಸಾಬ್, ಜಯಂತಿ, ರವಿಕುಮಾರ್, ಮಾಜಿ ಗ್ರಾಪಂ ಸದಸ್ಯರಾದ ಸ್ವಾಮಿ ಸೇರಿದಂತೆ ಹಲವಾರು ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments