ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬೇಕಾಬಿಟ್ಟಿ ಬಿಕರಿಯಾಗಿದೆ ಕಾಂಗ್ರೆಸ್ ಬಿ ಫಾರಂ

Parashurama
Updated On : 1 Mar 2013, 10:07 am

ಹೊಳೆನರಸೀಪುರ: ಪಕ್ಷ ಹಾಗೂ ಪಕ್ಷದ ಅಭಿವೃದ್ಧಿಗೆ ಶ್ರಮಿಸಿದ ನಿಷ್ಠಾವಂತರಿಗೆ ಪಕ್ಷದ ಬಿ-ಫಾರಂ ನೀಡದೆ, ಯಾರೊಬ್ಬರ ಸಲಹೆಗಳನ್ನೂ ಕೇಳದೆ ಕಾಂಗ್ರೆಸ್ ಬಿ-ಫಾರಂಗಳನ್ನು ಬೇಕಾಬಿಟ್ಟಿಯಾಗಿ ಹಂಚಲಾಗಿದೆ. ಆ ಮೂಲಕ ಈ ಬಾರಿಯ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅವನತಿಗೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ.ಹರೀಶ್ ನೇರ ಹೊಣೆಯಾಗಲಿದ್ದಾರೆ ಎಂದು ಪುರಸಭೆ ಮಾಜಿ ನಾಮ ನಿರ್ದೇಶಿತ ಸದಸ್ಯ, ಕಾಂಗ್ರೆಸ್ ಮುಖಂಡ ಎಚ್.ಟಿ.ಲಕ್ಷ್ಮಣ್ ಆರೋಪಿಸಿದ್ದಾರೆ.
ಈ ಕುರಿತಂತೆ ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಿಷ್ಠಾವಂತರು ಹಾಗೂ ಗೆಲ್ಲುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡದೆ, ಹರೀಶ್ ಅಸಭ್ಯವಾಗಿ ವರ್ತಿಸುವ, ಗುಡುಗುವ, ಬೆದರಿಕೆಯೊಡ್ಡುವ ಗುಂಪಿನಲ್ಲಿ ಗುರುತಿಸಿಕೊಂಡವರಿಗೆ ಪಕ್ಷದ ಟಿಕೆಟ್ ನೀಡಿದ್ದಾರೆ ವಿನಾ ಪಕ್ಷದ ಏಳ್ಗೆಗಾಗಿ ದುಡಿದವರನ್ನು ಕಡೆಗಣಿಸಲಾಗಿದೆ ಎಂದಿದ್ದಾರೆ.
ತಾಲೂಕಿನಲ್ಲಿ ಕಾಂಗ್ರೆಸ್ ಮುಖಂಡರ ಕಿತ್ತಾಟ ಮತ್ತು ಸ್ವ-ಪ್ರತಿಷ್ಠೆಗಳು ತಾರಕಕ್ಕೇರಿದ್ದ ಸನ್ನಿವೇಶದಲ್ಲಿ ಕಾಂಗ್ರೆಸ್‌ನ ಎಲ್ಲ ಬಣಗಳೂ ಒಂದುಗೂಡಬೇಕೆಂದು ಆಶಿಸಿದ್ದೆ. ಪರಸ್ಪರ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಂದೇ ವೇದಿಕೆಯಲ್ಲಿ ನಾಯಕರು ಕಾಣಿಸಿಕೊಳ್ಳುವಂತೆ ಮಾಡುವಲ್ಲಿ ಸಾಕಷ್ಟು ಶ್ರಮಿಸಿದ ತನ್ನನ್ನು ಪಕ್ಷದಲ್ಲಿ ತುಳಿಯಲು ಉದ್ದೇಶಿಸಲಾಗುತ್ತಿದೆ. ಜಿಲ್ಲೆಯ ಹಲವು ಕಾಂಗ್ರೇಸ್ ನಾಯಕರುಗಳೂ ನನ್ನ ಪತ್ನಿಗೆ ಟಿಕೆಟ್ ನೀಡುವಂತೆ ಶಿಫಾರಸು ಮಾಡಿದ್ದರೂ, ನೀಡಿಲ್ಲ. ಎಲ್ಲ ರೀತಿಯಿಂದಲೂ ಹರೀಶ್ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ವಜಾಕ್ಕೆ ಆಗ್ರಹ: ತಾಲೂಕಿನಲ್ಲಿ ಕಾಂಗ್ರೆಸ್‌ನ ಸಂಘಟಿತ ಹೋರಾಟಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸದ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ.ಹರೀಶ್ ಅವರನ್ನು ರಾಜ್ಯ ಕಾಂಗ್ರೆಸ್ ಮುಖಂಡರು ಕೂಡಲೇ ಆ ಸ್ಥಾನದಿಂದ ವಜಾಗೊಳಿಸುವಂತೆ ಲಕ್ಷ್ಮಣ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments