ರಾಮಮಂದಿರ ಕಟ್ಟುವ ನಿಟ್ಟಿನಲ್ಲಿ ಜನ ಜಾಗೃತಿ: ವಿಎಚ್ಪಿ ಕಾರ್ಯದರ್ಶಿ ಸಂತೋಷ್
ಸಕಲೇಶಪುರ: ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟುವ ನಿಟ್ಟಿನಲ್ಲಿ ವಿಶ್ವಹಿಂದೂ ಪರಿಷತ್ ದೇಶದಲ್ಲಿ ಜನಜಾಗೃತಿ ಮೂಡಿಸಲಿದೆ ಎಂದು ವಿಶ್ವಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಸಂತೋಷ್ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡು, ಅಲಹಾಬಾದ್ ಸಮೀಪದ ಪ್ರಯಾಗದಲ್ಲಿ ನಡೆದ ಕುಂಭಮೇಳದಲ್ಲಿ ಈ ನಿರ್ಣಯ ತೆಗೆದುಕೊಂಡಿದ್ದು, ಈ ವಿಚಾರವನ್ನು ಉಡುಪಿಯಲ್ಲಿ ನಡೆದ ಬಜರಂಗದಳದ ಪ್ರಾಂತ ಬೈಠಕ್ನಲ್ಲಿ ಸಮಸ್ತ ಹಿಂದೂಗಳಿಗೆ ತಲುಪಿಸುವ ಜವಾಬ್ದಾರಿಯನ್ನು ವಿಎಚ್ಪಿ ಹಾಗೂ ಭಜರಂಗದಳಕ್ಕೆ ಒಪ್ಪಿಸಲಾಗಿದೆ ಎಂದರು.
ಕುಂಭಮೇಳದಲ್ಲಿ ಭಾಗವಹಿಸಿದ್ದ ಸಂತರ ಆಶಯದಂತೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವುದು ಹಿಂದೂಗಳ ಕರ್ತವ್ಯವಾಗಿದ್ದು ಆದ್ದರಿಂದ ಕೇಂದ್ರ ಸರ್ಕಾರದ ಮೇಲೆ ರಾಮಮಂದಿರ ನಿರ್ಮಿಸಲು ಶಾಸನ ರೂಪಿಸುವಂತೆ ಒತ್ತಡ ಹೇರಲು ದೇಶದ ಪ್ರತಿಯೊಂದೂ ಹಿಂದುಗಳಲ್ಲೂ ಜನಜಾಗೃತಿ ಅಗತ್ಯವಾಗಿದ್ದು, ಅದಕ್ಕೆ ದೇಶದ ಮನೆ-ಮನೆಗಳಲ್ಲೂ ಪ್ರತಿದಿನ ಶ್ರೀರಾಮ ಮಹಾಮಂತ್ರವನ್ನು ಜಪಿಸಬೇಕೆಂದರು. ವಿಎಚ್ಪಿ ತಾಲೂಕು ಅಧ್ಯಕ್ಷ ಮುಖೇಶ್ ಶೆಟ್ಟಿ ರಾಜಕೀಯ ಪ್ರವೇಶ ಮಾಡಿರುವ ಕಾರಣ ಬೇರೆ ಅಧ್ಯಕ್ಷರ ಆಯ್ಕೆ ನಡೆಸಲಾಗುವುದು ಹಾಗೂ ಸ್ಥಳೀಯ ಚುನಾವಣೆಯಲ್ಲಿ ಬಜರಂಗದಳ ಹಾಗೂ ವಿಎಚ್ಪಿ ಯಾವುದೇ ಪಕ್ಷವನ್ನೂ ಬೆಂಬಲಿಸುವುದಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಬಜರಂಗದಳದ ತಾಲೂಕು ಸಂಯೋಜಕ ಧರ್ಮೇಶ್ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.