ಲೈಂಗಿಕ ದೌರ್ಜನ್ಯ: ಅರಿವಿಗೆ ತೀರ್ಮಾನ
ಹಾಸನ: ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ತಾಲೂಕು ಮಟ್ಟದ ಸಮಿತಿ ರಚಿಸಿ ಅವರಿಗೆ ತರಬೇತಿ ನೀಡಿ ಶಾಲೆಗಳಲ್ಲಿ ಅರಿವು ಮೂಡಿಸಲು ತೀರ್ಮಾನಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆದ ಮಹಿಳೆಯರ ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆ ಕುರಿತ ಕೋರ್ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಸಹಕಾರಿಯಾಗುವಂತೆ ಪೌಷ್ಟಿಕತೆ, ಬೆಳವಣಿಗೆ, ಹದಿಹರೆಯದಲ್ಲಿ ಶಾರೀರಿಕವಾಗಿ ಆಗುವ ಬದಲಾವಣೆ, ಹೆಣ್ಣು ಮಕ್ಕಳ ಸ್ವಯಂ ರಕ್ಷಣೆ, ಹೆಣ್ಣು ಭ್ರೂಣ ಹತ್ಯೆ ಮುಂತಾದ ವಿಷಯಗಳನ್ನು ಒಳಗೊಂಡ ಕೈಪಿಡಿ ತಯಾರಿಸಲು ನಿರ್ಧರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಚ್.ಸಿ.ಚಿದಾನಂದ್ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಿ.ಎಲ್.ಶ್ಯಾಮಲಾದೇವಿ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಲಲಿತಾ ದೇವಿ ಇತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.