ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ತಾಯಿ, ಮಕ್ಕಳಿಬ್ಬರ ಕೊಂದು ವ್ಯಕ್ತಿ ಆತ್ಮಹತ್ಯೆ

Parashurama
Updated On : 2 Mar 2013, 11:45 am

ಕ.ಪ್ರ. ವಾರ್ತೆ  ತುರುವೇಕೆರೆ ಮಾ. 2
ಇದ್ದ ಜಮೀನನ್ನು ಮಾರಿಕೊಂಡು ಜೀವನ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ಭವಿಷ್ಯದ ಚಿಂತೆಯಿಂದ ತಾಯಿ, ತನ್ನಿಬ್ಬರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಹಳ್ಳದಹೊಸಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೋರೇಗೌಡ ಎಂಬವರು ಈ ಕೃತ್ಯವೆಸಗಿದವರು. ಎಸ್‌ಎಸ್‌ಎಲ್‌ಸಿ ಓದಿ ಮನೆಯಲ್ಲಿದ್ದ ಸ್ವಪ್ನಾ, ದ್ವಿತೀಯ ಪಿಯುಸಿ ಓದುತ್ತಿದ್ದ ಸ್ವರೂಪ ಹಾಗೂ ತಾಯಿ ಲಕ್ಷ್ಮಮ್ಮ ಅವರನ್ನು ಮೊದಲು ಅಡುಗೆ ಮನೆಯಲ್ಲಿ ಸಾಯಿಸಿ, ನಂತರ ತಾನೂ ನೇಣಿಗೆ ಶರಣಾಗಿದ್ದಾನೆ. ಮಾನಸಿಕ ಅಸ್ವಸ್ಥೆಯಾದ ಪತ್ನಿ ರತ್ನಮ್ಮಳನ್ನು ಮನೆಯ ಹೊರಗಿರುವ ಕೊಠಡಿಯಲ್ಲಿಟ್ಟು ಊಟ ನೀಡಲಾಗುತ್ತಿತ್ತು. ಶನಿವಾರ ಬೆಳಗ್ಗೆ ಎಷ್ಟು ಹೊತ್ತಾದರೂ ಯಾರೂ ಕಾಫಿ ನೀಡಲು ಬಾರದಿದ್ದಾಗ ತನ್ನ ಕೊಠಡಿಯ ಹಿಂದಿನ ಕಿಟಕಿ ತೆಗೆದು ರತ್ನಮ್ಮ ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಬೋರೇಗೌಡ ತನಗಿರುವ ಜಮೀನನ್ನು ಮಾರಿ ಜೀವನ ನಿರ್ವಹಿಸುತ್ತಿದ್ದ. ಇತ್ತೀಚೆಗೆ ಕೈಯಲ್ಲಿದ್ದ ಹಣ ಖಾಲಿಯಾಗಿತ್ತು. ಪತ್ನಿಯೊಂದಿಗೆ ಸಾಮರಸ್ಯ ಹೊಂದಿರದ ಈತ ಯಾವುದೇ ಕೆಲಸವನ್ನೂ ಮಾಡುತ್ತಿರಲಿಲ್ಲ. ತಾಯಿ ಹಾಗೂ ಮಕ್ಕಳ ಬಾಯಿಗೆ ಬಟ್ಟೆ ತುರುಕಲಾಗಿದೆ. ಸಾವಿಗೆ ಖಚಿತ ಕಾರಣವೇನೆಂಬುದಿನ್ನೂ ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣ, ಶಾಸಕ ಎಂ.ಟಿ. ಕೃಷ್ಣಪ್ಪ, ಜಿಪಂ ಸದಸ್ಯ ಎ.ಬಿ.ಜಗದೀಶ್, ಹೆಚ್ಚುವರಿ ಎಸ್‌ಪಿ ಹನುಮಂತರಾಯ, ಡಿವೈಎಸ್ಪಿ ಉಷಾರಾಣಿ, ಸಿಪಿಐ ತಿರುಮಲಯ್ಯ ಹಾಗೂ ಎಸ್‌ಐ ಪ್ರೀತಮ್ ಭೇಟಿ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments