ಹಾಸನ

25ರ ನಂತರ ಪಟ್ಟಿ ಬಿಡುಗಡೆ

ಬೇಲೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸುತ್ತಿದ್ದು. ಮಾ. 25 ರ ನಂತರ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸದಾನಂದಗೌಡ ತಿಳಿಸಿದರು.
ಪಟ್ಟಣದಲ್ಲಿ ಭಾನುವಾರ ಎಪಿಎಂಸಿ ಅಧ್ಯಕ್ಷ ಈ.ಎಚ್.ಲಕ್ಷ್ಮಣ್ ಅವರ ಗೃಹ ಪ್ರವೇಶ ಹಾಗೂ ಪುರಸಭೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆಗೆ ಆಗಮಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಈಗಾಗಲೆ ಪಟ್ಟಿಯನ್ನು ಸಿದ್ದಪಡಿಸುವಲ್ಲಿ ರಾಜ್ಯ ನಾಯಕರು ಮುಂದಾಗಿದ್ದು, ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಜೊತೆ ಕೈ ಜೋಡಿಸುತ್ತಿದೆ ಎಂದು ಕೆಜೆಪಿಯವರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದಾಗಲೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇಲ್ಲಸಲ್ಲದ ಆರೋಪ ಮಾಡಿ ಅಧಿಕಾರದಿಂದ ಕೆಳಗಿಸಿದರು. ಈಗಲೂ ಅದೇ ರೀತಿಯಲ್ಲಿ ದನಂಜಯಕುಮಾರ್ ಹಾಗೂ ಯಡಿಯೂರಪ್ಪ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ತೊರೆದು ಹೊಸ ಪಕ್ಷ ಸ್ಥಾಪಿಸಿದವರ ಪರಿಸ್ಥಿತಿ ಚುನಾವಣೆಯ ನಂತರ ಅರಿವಾಗಲಿದೆ ಎಂದರು.
ತಾವು ಜೆಡಿಎಸ್ ಸೇರುವುದು ಉಹಾಪೋಹವಾಗಿದ್ದು ತಮ್ಮ ಅಂತಿಮ ಮನೆ ಬಿಜೆಪಿಯಾಗಿದ್ದು ಯಾವುದೇ ಪಕ್ಷಕ್ಕೆ ಪಕ್ಷಾಂತರ ಮಾಡುವುದಿಲ್ಲ. ಈಗ ನಡೆಯಲಿರುವ ಪೌರಸಂಸ್ಥೆ ಚುನಾವಣೆಯಲ್ಲಿ ಶೇ. 50 ರಷ್ಟು ಸ್ಥಾನವನ್ನು ರಾಜ್ಯದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಬೆಣ್ಣೂರು ರೇಣುಕುಮಾರ್, ಎಪಿಎಂಸಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯ ಇ.ಎಚ್.ಲಕ್ಷ್ಮಣ್, ಚನ್ನಕೇಶವ ಸ್ವಾಮಿ ದೇಗುಲ ಸಮಿತಿ ಅಧ್ಯಕ್ಷ ಜಿ.ಕೆ.ಕುಮಾರ್, ಜಿಲ್ಲಾ ಮೋರ್ಚಾದ ಅಭಿಗೌಡ, 9 ನೇ ವಾರ್ಡಿನ ಅಭ್ಯರ್ಥಿ ವಿಜಯಕೇಶವ ಹಾಗೂ ಇತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; 2 ದಿನಗಳ ಡೆಡ್‌ಲೈನ್‌!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ವಿವಿ ಫ್ರಟರ್ನಿಟಿ ಕಾರ್ಯಕ್ರಮದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ‘ನನ್ನ ಸರದಿ ಯಾವಾಗ?’ ಎಂದು ಕೂಗಿದ ಪುರುಷರು!

ಹೊಸ ಪಕ್ಷದ ಹೆಸರು ಘೋಷಿಸಿದ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್; 2027ರ ಯುಪಿ ಚುನಾವಣೆಗೆ ಸ್ಪರ್ಧೆ

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ