ಕಾಂಗ್ರೆಸ್ ಅಭ್ಯರ್ಥಿಗಳ ಪರ ಅಂಬರೀಷ್ ಮತಯಾಚನೆ
ಬೇಲೂರು: ಪುರಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಭಾನುವಾರ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಹಾಗೂ ಚಲನಚಿತ್ರ ನಟ ರೆಬಲ್ಸ್ಟಾರ್ ಅಂಬರೀಷ್ ಮತಯಾಚನೆ ಮಾಡಿ ರೋಡ್ ಶೋ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹೆಚ್ಚಿನ ಮತ ನೀಡುವ ಮೂಲಕ ಪಕ್ಷದ ಅಭ್ಯರ್ಥಿಗಳನ್ನು ಜಯಶೀಲರನ್ನಾಗಿಸಬೇಕು ಮತ್ತು ಉತ್ತಮ ಆಡಳಿತ ನಿರ್ವಹಿಸಲು ಅವಕಾಶ ಕಲ್ಪಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು. ಶಾಸಕ ವೈ.ಎನ್.ರುದ್ರೇಶ್ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಪುನೀತ್ಗೌಡ, ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ದಾಮೋದರ್, ಜಮಾಲ್, ಜುಬೇರ್, ಯಮಸಂದಿ ಪಾಪಣ್ಣ ಹಾಗೂ ಇತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.