ಚೆಕ್ ವಿತರಣಾ ಸಮಾರಂಭ
ಹಾಸನ: ಕಾಫಿ ಮಂಡಳಿಯ ಕಾರ್ಮಿಕ ಕಲ್ಯಾಣನಿಧಿ ವತಿಯಿಂದ 2012-13ನೇ ಸಾಲಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸಹಾಧನದ ಚೆಕ್ನ್ನು ಮಾರ್ಚ್ 6ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ವಿತರಿ ಸಲಾಗುವುದು. ಅರ್ಜಿ ಸಲ್ಲಿಸಿರುವ ಅರ್ಹ ಹಾಸನ, ಸಕಲೇಶಪುರ,ಬೇಲೂರು, ಹಾನು ಬಾಳು, ಮಗ್ಗೆ, ಯಸಳೂರು, ಭಾಗದ ವಿದ್ಯಾರ್ಥಿಗಳು ತಮ್ಮ ಕಾಲೇಜಿನಿಂದ ವಿತರಿಸಿರುವ ಭಾವಚಿತ್ರವುಳ್ಳ ಗುರುತಿನ ಕಾರ್ಡ್ ತೋರಿಸಿ ಚೆಕ್ ಪಡೆಯುವಂತೆ ಕಾಫಿ ಮಂಡಳಿ ಉಪನಿರ್ದೇಶಕರು ಮನವಿ ಮಾಡಿದ್ದಾರೆ.
ನೇತ್ರ ಉಚಿತ ತಪಾಸಣೆ
ಚನ್ನರಾಯಪಟ್ಟಣ: ಶ್ರವಣಬೆಳಗೊಳ, ಕಾಂತರಾಜಪುರ ಸೇರಿದಂತೆ ಹಲವು ಗ್ರಾಮಗಳಿಂದ ಆಗಮಿಸಿದ್ದ ಸುಮಾರು 60ಕ್ಕೂ ಹೆಚ್ಚು ನೇತ್ರ ತೊಂದರೆ ಇದ್ದವರಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಹೋಂ ಟ್ರಸ್ಟ್ನಿಂದ ಉಚಿತ ನೇತ್ರ ಪರೀಕ್ಷೆ ನಡೆಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.