ಬಿಎಸ್ಆರ್ ಕಾಂಗ್ರೆಸ್ ಪ್ರಚಾರ
ಸಕಲೇಶಪುರ: ಸ್ಥಳೀಯ ಪುರಸಭೆ ಚುನಾವಣೆಯ 10 ವಾರ್ಡ್ಗಳಲ್ಲಿ ಬಿಎಸ್ಆರ್ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಗಳಿಸಲಿದ್ದಾರೆಂದು ತಾಲೂಕು ಅಧ್ಯಕ್ಷ ರವಿಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಶನಿವಾರ ಮನೆಮನೆಗೆ ತೆರಳಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಟ್ಟಣದ 23 ವಾರ್ಡ್ಗಳಲ್ಲೂ ಸ್ಪರ್ಧಿಸಲು ಆಸಕ್ತರಿದ್ದರು. ಗೆಲ್ಲುವ ಅವಕಾಶವಿರುವ 13 ವಾರ್ಡ್ಗಳಿಗೆ ಮಾತ್ರ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಬಹುತೇಕ ಎಲ್ಲಾ ವಾರ್ಡ್ಗಳಲ್ಲೂ ಗೆಲುವು ನಮ್ಮದಾಗಲಿದ್ದು ಮುಂಬರುವ ಪುರಸಭೆ ಆಡಳಿತ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು. ಪಕ್ಷದ ಪಧಾದಿಕಾರಿ ಗುರುಮೂರ್ತಿ, ಜಯಣ್ಣ, ಸತೀಶ್, ದಿಲೀಪ್, ವೆಂಕಟೇಶ್ ಪಕ್ಷದ ಅಭ್ಯರ್ಥಿಗಳು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.