ವನಗೂರಲ್ಲಿ ಕುಡಿವ ನೀರಿಗೆ ಹಾಹಾಕಾರ
ಸಕಲೇಶಪುರ: ತಾಲೂಕಿನ ವನಗೂರು ಗ್ರಾಮದಲ್ಲಿ ಕುಡಿಯುವ ನೀರಿಗೆ ತೀವ್ರತೊಂದರೆಯಾಗಿದ್ದು ಮಹಿಳೆಯರು ನೀರಿಗಾಗಿ ಮೈಲಿಗಟ್ಟಲೆ ಅಲೆ ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಇಲ್ಲಿನ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ತಿಂಗಳಿಂದಲೂ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಗ್ರಾಮಪಂಚಾಯ್ತಿ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ತಲೆಕೆಡಿಸಿಕೊಳ್ಳದೆ ಜಾಣ ಕುರುಡು ಮೆರೆದಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ತು ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನೀರಿನ ಸಮಸ್ಯೆ ಕುರಿತು ಮನವಿ ಪತ್ರಗಳನ್ನು ಸಲ್ಲಿಸಿದ್ದರೂ ಕೂಡ ಪ್ರಯೋಜವಾಗಿಲ್ಲ. ಈ ಸಮಸ್ಯೆ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದರೂ ಅದನ್ನು ಗಮನಿಸದೆ ಸಮರ್ಪಕ ನೀರು ಪೂರೈಕೆಯಲ್ಲಿ ಗ್ರಾಮಪಂಚಾಯ್ತಿ ಅಧಿಕಾರಿಗಳು ಬೇಜವಾಬ್ದಾರಿತನ ತೋರುತ್ತಿ ದ್ದಾರೆ ಎಂದು ಆಕ್ಷೇಪಿಸಿದ್ದಾರೆ.
ಇಲ್ಲಿಗೆ ಸಮೀಪ ಇರುವ ಬ್ಯಾಗಡಹಳ್ಳಿಯಲ್ಲಿ ಆರೋಗ್ಯ ಇಲಾಖೆಯ ವಸತಿ ಕೇಂದ್ರಗಳಿದ್ದು ಆರೋಗ್ಯ ಕುರಿತು ಸಮಾರಂಭಗಳು, ಶಿಬಿರಗಳು ನಡೆದ್ದರೂ ಗ್ರಾಪಂಯಿಂದ ನೀರು ಪೂರೈಸಲು ಇವರಿಗೆ ಸಾಧ್ಯವಾಗದೆ ಜನರು ತೊಂದರೆ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಜನರು ದೂರಿದ್ದಾರೆ.
ಹಲವು ಪ್ರವಾಸಿಗರು ಪ್ರೇಕ್ಷಣಿಯ ಸ್ಥಳಗಳಿಗೆ ಈ ಮಾರ್ಗವಾಗಿ ಪ್ರವಾಸ ಮಾಡುತ್ತಿದ್ದು ಇವರು ವನಗೂರಿನ ಹೋಟೆಲ್ಗಳಲ್ಲಿ ಹಾಗೂ ಮನೆಗಳಲ್ಲಿ ಕುಡಿಯಲು ನೀರು ಕೇಳಿ ಸಿಗದೆ ಹಿಡಿ ಶಾಪ ಹಾಕಿಕೊಂಡು ಪ್ರಯಾಣ ಬೆಳೆಸುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಇನ್ನು ಮುಂದಾದರೂ ಸಂಬಂಧ ಪಟ್ಟ ಮೇಲಾಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿ ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ಮುಂದಾಗಬೇಕು. ಇಲ್ಲವಾದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.