ಹಾಸನ

ಅಗ್ನಿ ಆಕಸ್ಮಿಕ; ಲಕ್ಷಾಂತರ ನಷ್ಟ

ಹೊಳೆನರಸೀಪುರ: ಪಟ್ಟಣದ ಡ್ರೀಮ್‌ಲ್ಯಾಂಡ್ ಹೊಟೇಲ್ ಮುಂಭಾಗದಲ್ಲಿನ ಆಟೋಮೊಬೈಲ್ ಅಂಗಡಿಯಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಿಂದ ಲಕ್ಷಾಂತರ ರು ಬೆಲೆ ಬಾಳುವ ಸಾಮಾನುಗಳು ಸುಟ್ಟು ಕರಕಲಾಗಿವೆ.
ಭಾನುವಾರ ಮಧ್ಯಾಹ್ನ ನಾಲ್ಕು ಗಂಟೆ ವೇಳೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಂಗಡಿಯಲ್ಲಿದ್ದ ಸ್ಪೇರ್‌ಪಾರ್ಟ್ಸ್‌ಗಳು, ಆಯಿಲ್ ಕ್ಯಾನ್‌ಗಳು ಸುಟ್ಟುಹೋಗಿದ್ದು, ಅಂಗಡಿಯಲ್ಲಿದ್ದ ಮಾಲೀಕ ತೌಸಿಫ್‌ಗೆ ಸುಟ್ಟ ಗಾಯಗಳಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಬೆಂಕಿ ಹೊತ್ತಿಕೊಂಡ ವಿಷಯ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸುಮಾರು ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಶ್ವಿಯಾಯಿತು. ಅಕ್ಕಪಕ್ಕದ ಪ್ರಾಣ್ ಎಲೆಕ್ಟ್ರಾನಿಕ್ಸ್ ಮತ್ತು ಚಿಲ್ಲರೆ ಅಂಗಡಿಗಳಿಗೆ ಬೆಂಕಿ ಹರಡಿದ್ದರಿಂದ ಅಂಗಡಿಗಳಲ್ಲಿನ  ಟಿವಿ ಮತ್ತಿತರೆ ಸಾಮಾನುಗಳು ಬೆಂಕಿಯಲ್ಲಿ ಸುಟ್ಟುಕರಕಲಾಗಿವೆ. ಹಿಂದೆಯೂ ಈ ಕಟ್ಟಡದಲ್ಲಿ ಇದೇ ಮಾದರಿ ಬೆಂಕಿಹೊತ್ತಿಕೊಂಡು ಅವಘಡಕ್ಕೆ ಕಾರಣವಾಗಿತ್ತು. ಇದೀಗ ಸಂಭವಿಸಿರುವ ಅನಾಹುತದಿಂದ ಕಟ್ಟಡದ ಒಳಗಡೆ ಗೋಡೆಗಳು ಸೀಳು ಬಿಟ್ಟು ಶಿಥಿಲವಾಸ್ಥೆಗೆ ಕಾರಣವಾಗಿದೆ. ಪೋಲಿಸರು ದೂರು ದಾಖಲು ಮಾಡಿಕೊಂಡಿದ್ದಾರೆ. ಬೆಂಕಿಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!