ಹಾಸನ: ನಗರಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಗರದ ವಾರ್ಡ್ಗಳಲ್ಲಿ ಜೆಡಿಎಲ್ಪಿ ನಾಯಕ ಎಚ್.ಡಿ. ರೇವಣ್ಣ ಸೋಮವಾರ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದರು.
ನಗರದ ಎಲ್ಲಾ ವಾರ್ಡ್ಗಳಲ್ಲಿ ಪಕ್ಷದ ಅಭ್ಯರ್ಥಿಯ ಪರ ಮತ ನೀಡಿ ಜಯಗಳಿಸುವಂತೆ ಮನವಿ ಮಾಡಿದ ಅವರು ತಮ್ಮ ಅಧಿಕಾರವಾಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಲ್ಲಿ ಮನವರಿಕೆ ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಶಾಸಕ ಎಚ್.ಎಸ್.ಪ್ರಕಾಶ್, ವಿಧಾನಪರಿಷತ್ ಸದಸ್ಯ ಪಟೇಲ್ ಶಿವರಾಂ, ಮಾಜಿ ಶಾಸಕ ಬಿ.ವಿ.ಕರೀಗೌಡ, ಮುಖಂಡರಾದ ಕೆ.ಎಂ.ರಾಜೇಗೌಡ, ಚನ್ನವೀರಪ್ಪ, ತಾ ಅಧ್ಯಕ್ಷ ಎಸ್.ದೇವೇಗೌಡ, ರಾಜ್ಯ ಯುವ ಜೆಡಿಎಸ್ ಕಾರ್ಯದರ್ಶಿ ಹೊಂಗೆರೆ ರಘು, ಮಾಜಿ ನಗರಸಭಾ ಅಧ್ಯಕ್ಷ ಸಿ.ಆರ್.ಶಂಕರ್, ಅಭ್ಯರ್ಥಿಗಳು, ಕಾರ್ಯಕರ್ತರು ಹಾಗೂ ಇತರರು ಇದ್ದರು.