ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ನೀತಿ ಸಂಹಿತೆ ಉಲ್ಲಂಘಿಸಿ ಬೈಕ್ ರ್ಯಾಲಿ, ಊಟದ ವ್ಯವಸ್ಥೆ

Rashmi Kasaragodu
Updated On : 6 Mar 2013, 12:16 pm

ಕನ್ನಡಪ್ರಭ ವಾರ್ತೆ, ಸಕಲೇಶಪುರ, ಮಾ.5-
ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಘಟನೆ ಪಟ್ಟಣದ ಕುಡುಗರಹಳ್ಳಿ ಬಡಾವಣೆಯ 22 ಹಾಗೂ 23 ನೇ ವಾರ್ಡ್‌ನಲ್ಲಿ ಮಂಗಳವಾರ ನಡೆದಿದೆ. ಬಡಾವಣೆಯ 22 ನೇ ವಾರ್ಡ್‌ನಿಂದ ಸ್ಪರ್ಧಿಸಿರುವ ಪುಷ್ಪಾವತಿ ಹಾಗೂ 23 ನೇ ವಾರ್ಡ್ ಸ್ಪರ್ಧಿಸಿರುವ ಉಮೇಶ್ ಬೆಂಬಲಿಗರು ಬಡಾವಣೆಯಲ್ಲಿ ಬೈಕ್ ರ್ಯಾಲಿ ಹಾಗೂ ಮೆರವಣಿಗೆ ನಡೆಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದರು.
ಅಲ್ಲದೆ ವಾರ್ಡ್‌ನ ಶನೇಶ್ವರ ದೇವಸ್ಥಾನದ ಅವರಣದಲ್ಲಿ ಊಟದ ವ್ಯವಸ್ಥೆ ಸಹ ಏರ್ಪಡಿಸಲಾಗಿತ್ತು. ಈ ವಿಚಾರ ತಿಳಿದ ಕಾಂಗ್ರೆಸ್ ಕಾರ್ಯಕರ್ತರು ತಹಸೀಲ್ದಾರ್ ಅವರಿಗೆ ದೂರು ನೀಡಿದ್ದರು. ದೂರಿನ ಹಿನ್ನಲೇಯಲ್ಲಿ ಸ್ಥಳಕ್ಕಾಮಿಸಿದ ತಹಸೀಲ್ದಾರ್ ಮಂಜುನಾಥ್, ಪೊಲೀಸ್ ಸಿಬ್ಬಂದಿ ಊಟದ ವ್ಯವಸ್ಥೆ ಮಾಡಲಾಗಿದ್ದ ಪಾತ್ರೆಗಳನ್ನು ವಶಪಡಿಸಿಕೊಂಡು ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement