ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸಾರಿಗೆ ಬಸ್ ಡಿಕ್ಕಿ: ದಂಪತಿ ಸಾವು

Rashmi Kasaragodu
Updated On : 6 Mar 2013, 11:50 am

ಕನ್ನಡಪ್ರಭ ವಾರ್ತೆ, ಬೇಲೂರು. ಮಾ 6
ಜಿಲ್ಲೆಯಲ್ಲಿ ಮಂಗಳವಾರ ನಡೆದ ಪ್ರತ್ಯೇಕ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.ಸಾರಿಗೆ ಬಸ್ ಡಿಕ್ಕಿ ಮಾಡಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಮಂಗಳವಾರ ಹಾಸನ-ಬೇಲೂರು ರಸ್ತೆಯಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಗಂಜಲಗೂಡು ಗ್ರಾಮದ ಶಂಕರೇಗೌಡ (61) ಮತ್ತು ಪತ್ನಿ ರುಕ್ಮಿಣಿ (55) ಸಾವನ್ನಪ್ಪಿದ ದುರ್ದೈವಿಗಳು.
ಶಂಕರೇಗೌಡ ಪತ್ನಿ ರುಕ್ಮಿಣಿ ಹಾಗೂ ಇತರರೊಡನೆ ಕಾರಿನಲ್ಲಿ ಹಾಸನಕ್ಕೆ ಬಂದು ವಾಪಸ್ ಊರಿಗೆ ಹೋಗಲು ಹಾಸನ-ಬೇಲೂರು ರಸ್ತೆ, ನೆಟ್ಟೇಕೆರೆ ಗ್ರಾಮದ ಗಡಿ ಹತ್ತಿರ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ  ಸಾರಿಗೆ ಬಸ್ ಚಾಲಕನ ನಿರ್ಲಕ್ಷ್ಯತೆಯಿಂದ ಡಿಕ್ಕಿ ಮಾಡಿದ ಪರಿಣಾಮ ಕಾರಿನಲ್ಲಿದ್ದವರಿಗೆಲ್ಲ ತೀವ್ರ ಸ್ವರೂಪದ ಗಾಯವಾಗಿದ್ದು, ಶಂಕರೇಗೌಡ ಮತ್ತು ರುಕ್ಮಿಣಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದವರಿಗೆ ಚಿಕ್ಕಪುಟ್ಟ ಗಾಯಗಳಾಗಿ ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕೆ.ನವೀನ್  ಬೇಲೂರು ಠಾಣೆಗೆ ದೂರು ನೀಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಟ್ರ್ಯಾಕ್ಟರ್ ಕ್ಯಾಂಟರ್ ಡಿಕ್ಕಿ ಮಾಡಿದ ಪರಿಣಾಮ ಕ್ಯಾಂಟರ್ ಚಾಲಕ ಸಾವನ್ನಪ್ಪಿರುವ ಘಟನೆ ಅರಸೀಕೆರೆ-ಹುಳಿಯಾರ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಜೆಸಿಪುರ ಗ್ರಾಮದ ಗೌಸ್‌ಖಾನ್ ಸಾವನ್ನಪ್ಪಿದ್ದಾರೆ.ಗೌಸ್‌ಖಾನ್ ಕ್ಯಾಂಟರ್‌ನಲ್ಲಿ ನಿಟ್ಟೂರಿನಿಂದ ತೆಂಗಿನಕಾಯಿಯನ್ನು ಲೋಡ್ ಮಾಡಿಕೊಂಡು ಜೆಸಿಪುರಕ್ಕೆ ಹೋಗಲು ಮೇಣೆಕೆರೆ ಕ್ರಾಸ್ ಹತ್ತಿರ ಹೋಗುತ್ತಿದ್ದಾಗ ತಮ್ಮ ವಾಹನವನ್ನು ನಿರ್ಲಕ್ಷ್ಯತೆಯಿಂದ ಓಡಿಸಿಕೊಂಡು ಬಂದು ಎದುರಿನಿಂದ ಬರುತ್ತಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಡಿಕ್ಕಿ ಪರಿಣಾಮ ತೀವ್ರ ಗಾಯವಾಗಿದ್ದು, ಚಿಕಿತ್ಸೆಗಾಗಿ ಅರಸೀಕೆರೆ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement