ನೀತಿ ಸಂಹಿತೆ ಉಲ್ಲಂಘನೆ: ಮಾಜಿ ಶಾಸಕರ ವಿರುದ್ದ ದೂರು
ಕನ್ನಡಪ್ರಭವಾರ್ತೆ ಅರಕಲಗೂಡು ಮಾ.7:
ಚುನಾವಣೆ ಸಮಯದಲ್ಲಿ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ತಮ್ಮ ಪಕ್ಷದ ಅಭ್ಯರ್ಥಿ ಪರ ಗುಂಪಿನಲ್ಲಿ ಮತ ಯಾಚನೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿ.ವಾಸುದೇವ ಅವರು ಅರಕಲಗೂಡು ಪೊಲೀಸರಿಗೆ ದೂರು ನೀಡಿದ್ದಾರೆ.ಇಲ್ಲಿನ ಬೈಪಾಸ್ ರಸ್ತೆಯಲ್ಲಿ ರೋಡ್ ಶೋನಲ್ಲಿ ಎ.ಟಿ.ರಾಮಸ್ವಾಮಿ ಪಕ್ಷದ ಕಾರ್ಯಕರ್ತರ ತಂಡದೊಂದಿಗೆ ರೋಡ್ ಶೋನಲ್ಲಿ ತೆರಳಿದ್ದು, ಅದನ್ನು ವಿಡಿಯೋ ರೆಕಾರ್ಡಿಂಗ್ ಮಾಡಲಾಗಿದೆ.