ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಶಿಕ್ಷಕರ ಪ್ರತಿಭಟನೆ

Rashmi Kasaragodu
Updated On : 8 Mar 2013, 11:39 am

ಕನ್ನಡಪ್ರಭವಾರ್ತೆ  ಹಾಸನ  ಮಾ 8
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸರಿಯಾಗಿ ಮಾಸಿಕ ವೇತನ ನೀಡುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಶಿಕ್ಷಕರು ಶುಕ್ರವಾರ ಪ್ರತಿಭಟನೆ ನಡೆಸಿದರು.
  ಪ್ರತಿಭಟನಾಕಾರರು ನಗರದಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕೆಲಸಮಯ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
  ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರತಿ ತಿಂಗಳ 1ನೇ ತಾರೀಖಿಗೆ ವೇತನ ಪಾವತಿಸುವಂತೆ ರಾಜ್ಯ ಸರ್ಕಾರ ಅದೇಶಿಸಿದ್ದರೂ ಪ್ರತಿ ತಿಂಗಳು ವೇತನ ನೀಡುವಲ್ಲಿ ಇಲಾಖೆ ಅಧಿಕಾರಿಗಳು ಮಲತಾಯಿ ಧೋರಣೆ ನೀತಿ ಅನುಸರಿಸುತ್ತಿದ್ದಾರೆ. ಕಳೆದ ಫೆಬ್ರವರಿಯ ವೇತನ ಇನ್ನೂ ಶಿಕ್ಷಕರಿಗೆ ನೀಡಿಲ್ಲ.
  ಶಿಕ್ಷಕರು ತಮ್ಮ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದರೂ ತಿಂಗಳಿಗೆ ಸರಿಯಾಗಿ ವೇತನ ನೀಡಿದೆ ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 ಕೇಂದ್ರ ಹಾಗೂ ನೆರೆ ಹೊರೆಯ ರಾಜ್ಯ ಸರ್ಕಾರಗಳಿಗೆ ಹೋಲಿಸಿದರೆ ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢ ಶಾಲಾ ಶಿಕ್ಷಕರ ಪದವಿ ಪೂರ್ವ ಉಪನ್ಯಾಸಕರು, ಅತ್ಯಂತ ಕಡಿಮೆ ಮೂಲ ವೇತನ ಪಡೆಯುತ್ತಿದ್ದಾರೆ. ಇದೇ ರಾಜ್ಯದ ಬೇರೆ ಇಲಾಖೆಯ ಇತರೆ ನೌಕರರಿಗಿಂತ ಶಿಕ್ಷಕರು, ಉಪನ್ಯಾಸಕರು, ಕಡಿಮೆ ವೇತನ ಪಡೆಯುತ್ತಿದ್ದಾರೆ. ಇತರೆ ನೌಕರರಂತೆ ಶಿಕ್ಷಕರು, ಉಪನ್ಯಾಸಕರು ಪ್ರಾಮಾಣಿಕವಾಗಿ ಹಾಗೂ ಅವರಷ್ಟೆ ಸಮಾನವಾದ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
  ಮಕ್ಕಳ ವಿದ್ಯಾಭ್ಯಾಸಕ್ಕೆ, ಕುಟುಂಬ ನಿರ್ವಹಣೆಗೆ ಹಾಗೂ ವೈದ್ಯಕೀಯ ನಿರ್ವಹಣೆ ಹಾಗೂ ಹಬ್ಬಗಳನ್ನು ಆಚರಿಸಿ ನಿತ್ಯ ಜೀವನ ನಡೆಸಲು ಶಿಕ್ಷಕರು ವೇತನವನ್ನೇ ಅವಲಂಬಿಸುತ್ತಿರುವುದರಿಂದ ತಿಂಗಳಿಗೆ ಸರಿಯಾಗಿ ವೇತನ ನೀಡಬೇಕು.
  ಸರಿಯಾಗಿ ವೇತನ ನೀಡದ ಪರಿಣಾಮ ಶಿಕ್ಷಣಕರು ಹಣಕ್ಕಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.  ಸಾಲ ಮಾಡಿ ಜೀವನ ನಿರ್ವಹಣೆ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಲವತ್ತುಕೊಂಡರು.  
  ವೇತನ ತಾರತಮ್ಯದಿಂದ ಶಿಕ್ಷಕರು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ತಕ್ಷಣ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.
ಬೇಡಿಕೆಗಳು: ಶಿಕ್ಷಕರಿಗೆ ತಿಂಗಳಿಗೆ ಸರಿಯಾಗಿ ವೇತನ ನೀಡಬೇಕು. ವೇತನ ತಾರತಮ್ಯ ನಿವಾರಿಸಬೇಕು.ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯ ಪ್ರಾಥಮಿಕ ಪ್ರೌಢಶಾಲೆ ಮತ್ತು ಉಪನ್ಯಾಸಕರಿಗೆ ನೀಡುತ್ತಿರುವ ಕಾಲ್ಪನಿಕ ವೇತನ ಭತ್ಯೆ ಮುಂದುವರಿಸಬೇಕು ಎಂದು ಒತ್ತಾಯಿಸಿದರು.
 ಪ್ರತಿಭಟನೆಯಲ್ಲಿ ಜಿಲ್ಲಾ ಘಟಕ ಅಧ್ಯಕ್ಷ ಶಿವೇಗೌಡ, ಉಪಾಧ್ಯಕ್ಷ ಕಾಳೇಗೌಡ, ಕಾರ್ಯಾಧ್ಯಕ್ಷ ಹೊನ್ನವಳ್ಳಿ ವೆಂಕಟೇಶ್, ಕಾರ್ಯದರ್ಶಿ ಹನುಮಂತೇಗೌಡ, ಉಪಾಧ್ಯಕ್ಷ ಬಿ.ಎಸ್.ಸೋಮಶೇಖರ್, ನಾಯಕರಹಳ್ಳಿ ಮಂಜೇಗೌಡ, ಎಚ್.ಕೆ.ಮಂಜುನಾಥ್, ವರದರಾಜ್, ಕೆ.ಎನ್.ಚೈತ್ರ, ಸಿ.ಎಂ.ನಾಗರತ್ನ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement