ಇಂಗ್ಲಿಷ್ ಕಲಿಕೆ ಇಂದು ಅನಿವಾರ್ಯ: ಡಾ.ನಾರಾಯಣ
ಕ.ಪ್ರ.ವಾರ್ತೆ ಹಾಸನ ಮಾ.9
ಇಂದಿನ ಜಾಗತಿಕ ಮಟ್ಟದಲ್ಲಿ ಆಂಗ್ಲ ಭಾಷೆ ಕಲಿಯುವುದು ಅನಿವಾರ್ಯ. ಮತ್ತು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆ ಸುಲಲಿತ ಇದ್ದರೆ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಪ್ರಾಂಶುಪಾಲ ಡಾ.ಜಿ.ಡಿ.ನಾರಾಯಣ ತಿಳಿಸಿದರು.
ಹೊಳೆನರಸೀಪುರ ತಾ. ಪಡುವಲಹಿಪ್ಪೆ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಹೊಸ ಹೆಜ್ಜೆ ಕಾರ್ಯಕ್ರಮದಡಿಯಲ್ಲಿ ಏರ್ಪಡಿಸಿದ್ದ ಗ್ರಾಮೀಣ ಮಟ್ಟದಲ್ಲಿರುವ ವಿದ್ಯಾರ್ಥಿಗಳಿಗಾಗಿಯೇ ರೂಪಿಸಿರುವ ಎರಡನೇ ವರ್ಷದ ಆಂಗ್ಲ ಎಂಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಂಗ್ಲ ಭಾಷೆ ಕಾರ್ಯಕ್ರಮ ಯೋಜನಾ ವ್ಯವಸ್ಥಾಪಕ ನರಹರಿ ಮಾತನಾಡಿ, ಇಂಗ್ಲಿಷ್ ಅಂತಾರಾಷ್ಟ್ರೀಯ ಭಾಷೆಯಾಗಿದ್ದು, ಈ ಭಾಷೆ ಕಲಿತುಕೊಂಡರೆ ಯಾವುದೇ ದೇಶದಲ್ಲಿ ಉದ್ಯೋಗಾವಕಾಶ ಪಡೆಯಬಹುದು ಎಂದು ತಿಳಿಸಿದರು. ಆಂಗ್ಲ ಭಾಷೆ ಸಹಾಯಕ ಪ್ರಾಧ್ಯಾಪಕ ಎನ್.ಟಿ.ಶ್ರೀನಿವಾಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಆಂಗ್ಲ ಭಾಷೆಯ ಮಹತ್ವ ಮತ್ತು ಸದುಪಯೋಗದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಬಿಕಾಂ ವಿದ್ಯಾರ್ಥಿನಿ ಗೀತಾ ಸ್ವಾಗತಿಸಿದರು. ಪ್ರಥಮ ಬಿಬಿಎಂ ವಿದ್ಯಾರ್ಥಿ ವಿದ್ಯಾ ವಂದಿಸಿದರು. ಪ್ರಥಮ ಬಿಕಾಂ ವಿದ್ಯಾರ್ಥಿನಿ ರಶ್ಮಿ ನಿರೂಪಿಸಿದರು.