ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ
ಹಾಸನ: ನಗರದ ಎ.ವಿ.ಕಾಂತಮ್ಮ ಮಹಿಳಾ ಕಾಲೇಜು, ರಾಜ್ಯ ಸರ್ಕಾರದ ಆಯುಷ್ ಇಲಾಖೆ ಸಹಯೋಗದೊಂದಿಗೆ ಮಾ.11 ಮತ್ತು 12 ರಂದು 2 ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ನಗರದ ಕಲಾ ಭವನದಲ್ಲಿ ಬೆಳಗ್ಗೆ 10ಕ್ಕೆ ಏರ್ಪಡಿಸಿದೆ. ಅಂದು ಅಪರೂಪವಾಗಿ ದೊರೆಯುವ ಔಷಧೀಯ ಗುಣವುಳ್ಳ ಸಸ್ಯ ಪ್ರಭೇದ ಹಾಗೂ ಗಿಡಮೂಲಿಕೆಗಳನ್ನು ಬೆಳೆಸುವುದು, ಸಂರಕ್ಷಿಸುವುದು ಮತ್ತು ಅವುಗಳ ಪ್ರಯೋಜನ ಪಡೆಯುವುದಕ್ಕೆ ಸಂಬಂಧಿಸಿದಂತೆ ತಮ್ಮ ಅಮೂಲ್ಯ ಸಲಹೆ, ಸೂಚನೆ ಹಾಗೂ ಅಭಿಪ್ರಾಯ ವ್ಯಕ್ತಪಡಿಸಲು ಅನುಕೂಲವಾಗುವಂತೆ ಸಂಶೋಧನಾ ತಜ್ಞರು, ವಿದ್ಯಾರ್ಥಿಗಳು, ಸ್ಥಳೀಯರು, ವೈದ್ಯರು ಹಾಗೂ ಶಿಕ್ಷಣ ತಜ್ಞರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಾಗಾರ ಯಶಸ್ವಿಯಾಗಲು ಹಾಗೂ ಅದರ ಪ್ರಯೋಜನ ಪಡೆದುಕೊಳ್ಳಲು ತಿಳಿಸಲಾಗಿದೆ.