ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮತ ಎಣಿಕೆ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ

Rashmi Kasaragodu
Updated On : 9 Mar 2013, 11:34 am

ಕನ್ನಡಪ್ರಭ ವಾರ್ತೆ  ಹಾಸನ  ಮಾ. 9
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಮತಗಳ ಎಣಿಕೆ ಕಾರ್ಯ ಬಗ್ಗೆ ಅಧಿಕಾರಿಗಳಿಂದ ಅಭ್ಯರ್ಥಿಗಳಿಗೆ  ಮಾಹಿತಿ ನೀಡಲಾಯಿತು. ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚುನಾವಣೆ ಮತ ಎಣಿಕೆ ಪೂರ್ಣಗೊಂಡು ಎಲ್ಲ ಪ್ರಕ್ರಿಯೆ ಮುಗಿಯುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಅದು ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಲಾಯಿತು. ನಿಗದಿತ ಸಮಯಕ್ಕೆ ಸರಿಯಾಗಿ  ಮಾರ್ಚ್  11ರಂದು ಬೆಳಗ್ಗೆ 8ಕ್ಕೆ ಸರಿಯಾಗಿ ಮತ ಎಣಿಕೆ ಪ್ರಾರಂಭವಾಗಲೇಬೇಕು. ಬೆಳಗ್ಗೆ 7.45ಕ್ಕೆ ಮತ ಯಂತ್ರಗಳನ್ನು ಹೊರತೆಗೆಯಬೇಕು ಅದಕ್ಕೆ ಮುನ್ನವೇ 7.30ರೊಳಗೆ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಜರಿರುವಂತೆ ಸೂಚನೆ ನೀಡಲಾಗುವುದು ಎಂದರು. ಪೊಲೀಸ್ ಅಧಿಕಾರಿ ಯಡಾ ಮಾರ್ಟಿನ್ ಸೇರಿದಂತೆ ಚುನಾವಣೆ ಸಂಬಂಧಿತ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement