ರು. 11.5 ಕೋಟಿ ಕಾಮಗಾರಿಗೆ ಚಾಲನೆ
ಕ.ಪ್ರ. ವಾರ್ತೆ ಹಾಸನ ಮಾ 9
ಸತ್ಯವಂಗಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ನ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯ 11.5 ಕೋಟಿ ರು. ಕಾಮಗಾರಿಗೆ ಶನಿವಾರ ಚಾಲನೆ ನೀಡಲಾಯಿತು.
ಶಾಸಕ ಎಚ್.ಎಸ್.ಪ್ರಕಾಶ್ ನಗರದ ವಿದ್ಯಾನಗರದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಈ ಯೋಜನೆಯಡಿಯಲ್ಲಿ ಸುಮಾರು 20 ಗ್ರಾಮಗಳು ಸೇರಿಲಿದ್ದು, ರಸ್ತೆ ಕಾಮಗಾರಿ ನಡೆಯಲಿದೆ. ಈ ಸಂದರ್ಭದಲ್ಲಿ ಸತ್ಯವಂಗಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ದರ್ಶನ್ ಬಾಬು ಇತರರು ಇದ್ದರು.